Dailyhunt Logo
  • Light mode
    Follow system
    Dark mode
    • Play Story
    • App Story
ಸೇವಾ ಕಾರ್ಯಕ್ಕೆ ರಾಜ್ಯದ ಮನ್ನಣೆ: ಯೆನೆಪೋಯ ಪದವಿ ಕಾಲೇಜಿನ ಮೂವರಿಗೆ ರಾಜ್ಯಪ್ರಶಸ್ತಿ

ಸೇವಾ ಕಾರ್ಯಕ್ಕೆ ರಾಜ್ಯದ ಮನ್ನಣೆ: ಯೆನೆಪೋಯ ಪದವಿ ಕಾಲೇಜಿನ ಮೂವರಿಗೆ ರಾಜ್ಯಪ್ರಶಸ್ತಿ

ಮಂಗಳೂರು: ಯೆನೆಪೋಯ (ಪರಿಗಣಿತ) ವಿಶ್ವವಿದ್ಯಾಲಯದ ಘಟಕ ಸಂಸ್ಥೆಯಾದ ಯೆನೆಪೋಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಆಯಂಡ್ ಮ್ಯಾನೇಜ್‌ಮೆಂಟ್ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಚಟುವಟಿಕೆಗಳಲ್ಲಿ ಗಮನಾರ್ಹ ಸಾಧನೆ ಮಾಡಿದೆ.

ಕರ್ನಾಟಕ ಸರ್ಕಾರದ ರಾಜ್ಯಮಟ್ಟದ ಎನ್‌ಎಸ್‌ಎಸ್ ಪ್ರಶಸ್ತಿಗೆ ಕಾಲೇಜಿನ ಒಬ್ಬ ಅಧ್ಯಾಪಕಿ ಹಾಗೂ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಕಾಲೇಜಿನ ಎನ್‌ಎಸ್‌ಎಸ್ ಘಟಕಕ್ಕೂ ಪ್ರಶಸ್ತಿ ಲಭಿಸಿದೆ.

ಈ ಮೂಲಕ ಸಂಸ್ಥೆಗೆ ಒಟ್ಟು ನಾಲ್ಕು ರಾಜ್ಯಮಟ್ಟದ ಪ್ರಶಸ್ತಿಗಳು ದೊರೆತಿವೆ.

2023-24ನೇ ಸಾಲಿನ ಅತ್ಯುತ್ತಮ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಪ್ರಶಸ್ತಿಗೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಕೊಲಿನ್ ಜಾನೆಟ್ ಭಾಜನರಾಗಿದ್ದಾರೆ. ಇದೇ ಸಾಲಿನ ಅತ್ಯುತ್ತಮ ಎನ್‌ಎಸ್‌ಎಸ್ ಸ್ವಯಂಸೇವಕ ಪ್ರಶಸ್ತಿಯನ್ನು ಕಾಲೇಜಿನ ವಿದ್ಯಾರ್ಥಿ ಶ್ರೀಜನ್ ಬಿ.ಸಿ. ಪಡೆದುಕೊಂಡಿದ್ದಾರೆ. 2024-25ನೇ ಸಾಲಿನ ಅತ್ಯುತ್ತಮ ಎನ್‌ಎಸ್‌ಎಸ್ ಸ್ವಯಂಸೇವಕಿ ಪ್ರಶಸ್ತಿಗೆ ವಿದ್ಯಾರ್ಥಿನಿ ಸಾನಿಯಾ ಕೆ. ಆಯ್ಕೆಯಾಗಿದ್ದಾರೆ. ಇದರೊಂದಿಗೆ ಕಾಲೇಜಿನ ಎನ್‌ಎಸ್‌ಎಸ್ ಘಟಕಕ್ಕೂ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ.

ಕರ್ನಾಟಕ ಸರ್ಕಾರದ ವತಿಯಿಂದ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಎನ್‌ಎಸ್‌ಎಸ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಸಮಾರಂಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಗಣ್ಯರು ಭಾಗವಹಿಸುವರು.

ಸಮಾಜಮುಖಿ ಚಟುವಟಿಕೆಗಳು, ಸಮುದಾಯ ಸೇವೆ, ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳು ಹಾಗೂ ವಿವಿಧ ಜನಪರ ಕಾರ್ಯಗಳಲ್ಲಿ ಎನ್‌ಎಸ್‌ಎಸ್ ಘಟಕದ ಮೂಲಕ ಸಲ್ಲಿಸಿದ ಸೇವೆ ಮತ್ತು ಬದ್ಧತೆಯನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ, ಸೇವಾ ಮನೋಭಾವ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಕಾಲೇಜಿನ ಎನ್‌ಎಸ್‌ಎಸ್ ಘಟಕ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಅಧ್ಯಾಪಕರು ಮತ್ತು ವಿದ್ಯಾರ್ಥಿಗಳ ಸಂಘಟಿತ ಪ್ರಯತ್ನ ಹಾಗೂ ಸಮರ್ಪಣಾ ಮನೋಭಾವ ಈ ಸಾಧನೆಗೆ ಪ್ರಮುಖ ಕಾರಣವಾಗಿದೆ.

ಒಂದೇ ಸಂಸ್ಥೆಯ ಎನ್‌ಎಸ್‌ಎಸ್ ಘಟಕದ ಜೊತೆಗೆ ಅಧ್ಯಾಪಕಿ ಮತ್ತು ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿರುವುದು ಕಾಲೇಜಿನ ಶೈಕ್ಷಣಿಕ ಸಾಧನೆಯೊಂದಿಗೆ ಸಾಮಾಜಿಕ ಸೇವಾ ಕ್ಷೇತ್ರದಲ್ಲಿಯೂ ಹೊಂದಿರುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಈ ಸಾಧನೆಯು ಕಾಲೇಜಿನ ಇತರ ವಿದ್ಯಾರ್ಥಿಗಳಿಗೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆಯಾಗಲಿದೆ.

ಯೆನೆಪೋಯ (ಪರಿಗಣಿತ) ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಯೆನೆಪೋಯ ಅಬ್ದುಲ್ಲಾ ಕುಂಞಿ, ಸಹಕುಲಾಧಿಪತಿ ಶ್ರೀ ಮೊಹಮ್ಮದ್ ಫರ್ಹಾದ್ ಯೆನೆಪೋಯ, ಕುಲಪತಿ ಡಾ. ಕೆ. ಎಸ್. ಗಂಗಾಧರ ಸೋಮಯಾಜಿ, ಕುಲಸಚಿವರಾದ ಡಾ. ಅಶ್ವಿನಿ ದತ್ ಆರ್. ಹಾಗೂ ವಿಸ್ತರಣೆ ಮತ್ತು ಹೊರಚಟುವಟಿಕೆಗಳ ನಿರ್ದೇಶಕಿ ಡಾ. ಅಶ್ವಿನಿ ಎಸ್. ಶೆಟ್ಟಿ ಅವರು ಪ್ರಶಸ್ತಿ ವಿಜೇತರನ್ನು ಅಭಿನಂದಿಸಿ, ಎನ್‌ಎಸ್‌ಎಸ್ ಚಟುವಟಿಕೆಗಳಲ್ಲಿನ ಅವರ ಸೇವೆ, ಸಮರ್ಪಣೆ ಮತ್ತು ಬದ್ಧತೆಯನ್ನು ಶ್ಲಾಘಿಸಿದ್ದಾರೆ.

ಕಾಲೇಜಿನ ಪ್ರಾಂಶುಪಾಲ ಹಾಗೂ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಡೀನ್, ಪ್ರೊ. ಜೀವನ್ ರಾಜ್, ಉಪಪ್ರಾಂಶುಪಾಲ ಪ್ರೊ. ರತ್ನಾಕರ ಶೆಟ್ಟಿ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: News Kannada