Dailyhunt Logo
  • Light mode
    Follow system
    Dark mode
    • Play Story
    • App Story
ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್: ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್: ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ಡುಪಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.

ನಗರದ ಕಿನ್ನಿಮೂಲ್ಕಿ ಪ್ರದೇಶದಲ್ಲಿ ಡಿ.ಕೆ. ಶಿವಕುಮಾರ್ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಜೈಕಾರಗಳನ್ನು ಕೂಗಿ ಸಂಭ್ರಮಿಸಿದರು.

ನೂತನ ಮುಖ್ಯಮಂತ್ರಿಗೆ ಶುಭಾಶಯಗಳನ್ನು ಕೋರಿ ಪರಸ್ಪರ ಸಿಹಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದರು.

ಉಡುಪಿ ನಗರದಲ್ಲಿ ವಿಜಯೋತ್ಸವದ ವಾತಾವರಣ ನಿರ್ಮಾಣವಾಗಿದ್ದು, ಕಾರ್ಯಕರ್ತರು ಪಕ್ಷದ ಧ್ವಜಗಳನ್ನು ಹಿಡಿದು ಮೆರವಣಿಗೆಯ ರೀತಿಯಲ್ಲಿ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದರು. ಡಿ.ಕೆ. ಶಿವಕುಮಾರ್ ಅವರ ನಾಯಕತ್ವಕ್ಕೆ ಬೆಂಬಲ ಸೂಚಿಸಿದ ಅಭಿಮಾನಿಗಳು, ರಾಜ್ಯದ ಅಭಿವೃದ್ಧಿಗೆ ಅವರ ಆಡಳಿತ ಹೊಸ ದಿಕ್ಕು ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಸ್ವಾಗತ ಗೋಪುರದ ಬಳಿ ಸಾರ್ವಜನಿಕರಿಗೆ ಸಿಹಿ ತಿಂಡಿ ವಿತರಿಸಲಾಯಿತು.

Dailyhunt
Disclaimer: This content has not been generated, created or edited by Dailyhunt. Publisher: News Kannada