Dailyhunt Logo
  • Light mode
    Follow system
    Dark mode
    • Play Story
    • App Story
ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ನ್ನು ಖಂಡಿಸಿ SFI - DYFI ಪ್ರತಿಭಟನೆ

ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ನ್ನು ಖಂಡಿಸಿ SFI - DYFI ಪ್ರತಿಭಟನೆ

ಹೊಸಪೇಟೆ: ಕೇಂದ್ರ ಶಿಕ್ಷಣ ಸಚಿವ ಧರ್ಮೇದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ, NTA & NEET ರದ್ದುಗೊಳಿಸಲು ಹಾಗೂ ವಿದ್ಯಾರ್ಥಿ - ಯುವಜನರ ಮೇಲಿನ ಲಾಠಿ ಚಾರ್ಜ್ ನ್ನು ಖಂಡಿಸಿ ಮತ್ತು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮದಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟೆ ಪರಿಹಾರ ನೀಡುವಂತೆ ಒತ್ತಾಯಿಸಿ ಇಂದು ಹೊಸಪೇಟೆಯಲ್ಲಿ SFI - DYFI ವಿಜಯನಗರ ಜಿಲ್ಲಾ ಸಮಿತಿ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಧರಣಿ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್ ಎಫ್ ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಶಿವರೆಡ್ಡಿ ಮಾತನಾಡಿ ವಿದ್ಯಾರ್ಥಿ ಯುವಜನರ ಜಂತರ್ ಮಂತರ್ ನಲ್ಲಿ ಶಾಂತಿಯುತ ಪ್ರತಿಭಟನೆಯನ್ನು ಮಾಡುತ್ತಿದ್ದು ವಿದ್ಯಾರ್ಥಿ ಯುವಜನರ ಮೇಲೆ ಅತ್ಯಂತ ಕ್ರೂರವಾಗಿ ಹಲ್ಲೆಯನ್ನು ಮಾಡಿದ್ದಾರೆ ಇದನ್ನು ವಿದ್ಯಾರ್ಥಿ - ಯುವಜನರ ಬಲವಾಗಿ ಖಂಡಿಸುತ್ತೆದೆ ಹಾಗೂ ನೀಟ್ ಪರೀಕ್ಷಾ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.

ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಕಾಪಾಡುವಲ್ಲಿ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಿಂದ ಅವರ ಕುಟುಂಬ ಅತಂತ್ರಕ್ಕೆ ಸಿಲುಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

DYFI ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಮಾತನಾಡಿ ಕೇಂದ್ರ ಶಿಕ್ಷಣ ಸಚಿವ ಧಮೇರ್ಂದ್ರ ಪ್ರಧಾನ್ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಬೇಕು. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ಘೋಷಿಸ ಬೇಕು. ಶಿಕ್ಷಣ ಕ್ಷೇತ್ರದಲ್ಲಿನ ಕೇಂದ್ರೀಕರಣ ಮತ್ತು ಖಾಸಗೀಕರಣ ನೀತಿಗಳನ್ನು ಕೈಬಿಟ್ಟು, ವೈಜ್ಞಾನಿಕ ಹಾಗೂ ಸಮಾನ ಅವಕಾಶ ಒಳಗೊಂಡ ಪರೀಕ್ಷಾ ವ್ಯವಸ್ಥೆ ಜಾರಿಗೆ ತರಬೇಕು. ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗುವವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

CITU ಮುಖಂಡರಾದ ನಗರತ್ನಮ್ಮ ಮಾತನಾಡಿ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ ಹಾಗೂ ಈ ಅಕ್ರಮಕ್ಕೆ ನೈತಿಕ ಹೊಣೆ ಹೊತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಶಿಕ್ಷಣ ಸಚಿವ ಧಮೇರ್ಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಬೇಕು ಎಂದು ಹೇಳಿದರು.

ಪ್ರತಿಭಟನೆಯನ್ನುದ್ದೇಶಿಸಿ AILU ರಾಜ್ಯ ಮುಖಂಡರಾದ ಕರುಣಾನಿಧಿ ಮಾತನಾಡಿದ ಅವರು "ಶಿಕ್ಷಣ ಕ್ಷೇತ್ರದಲ್ಲಿನ ಭ್ರಷ್ಟಾಚಾರ ಮತ್ತು ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ವಿದ್ಯಾರ್ಥಿ ಕುಟುಂಬಗಳಿಗೆ ಸೂಕ್ತ ನ್ಯಾಯ ಸಿಗುವವರೆಗೆ ನಮ್ಮ ಈ ಹೋರಾಟ ವಿಶ್ರಮಿಸುವುದಿಲ್ಲ. ಮುಂದಿನ ದಿನಗಳಲ್ಲಿ ಇನ್ನು ಹೋರಾಟವನ್ನು ರಾಜ್ಯದಲ್ಲಿ ಎಚ್ಚರಗೊಳ್ಳಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಸ್ ಎಫ್ ಐ ಜಿಲ್ಲಾ ಕಾರ್ಯದರ್ಶಿ ಶಿವರೆಡ್ಡಿ, DYFI ಜಿಲ್ಲಾ ಕಾರ್ಯದರ್ಶಿ ಮಂಜುನಾಥ್, DYFI ಜಿಲ್ಲಾಧ್ಯಕ್ಷರಾದ ವಿ ಸ್ವಾಮಿ, AILU ಮುಖಂಡರಾದ ಕರುಣಾನಿಧಿ, ಬಿಸಾಟಿ ಮಹೇಶ್, DHS ಮುಖಂಡರಾದ ಜಂಬಯ್ಯಾ ನಾಯ್ಕ್, ತಾಯಪ್ಪ ನಾಯಕ್, CITU ಮುಖಂಡರಾದ ಭಾಸ್ಕರ್ ರೆಡ್ಡಿ, ನಾಗರತ್ನಮ್ಮ, ಯಲ್ಲಾಲಿಂಗ, LIC ಮುಖಂಡರಾದ ಚನ್ನಬಸಯ್ಯ, ಪ್ರಕಾಶ, ಸಮುದಾಯ ಮುಖಂಡರಾದ ಉಮಾಮಹೇಶ್ವರ, ಜಂಬುನಾಥ, ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: News Kannada