ಬ್ರಹ್ಮಾವರ : ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಮನೆಯಲ್ಲಿದ್ದ ತಾಮ್ರ ಹಾಗೂ ಹಿತ್ತಾಳೆ ಪೂಜಾ ಸಾಮಗ್ರಿ ಹಾಗೂ ಗ್ರಹೋಪಯೋಗಿ ವಸ್ತುಗಳನ್ನು ಕದ್ದು ಪರಾರಿಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಬಾರಕೂರು ಸಮೀಪದ ಹನೇಹಳ್ಳಿ ಗ್ರಾಮದ ಚಾಂಪಾಡಿ ಎಂಬಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂಪಾಡಿಯ ನಿವಾಸಿಯಾಗಿರುವ ಜಲಜಾಕ್ಷಿ ಎಂಬವರು ಮನೆಗೆ ಬೀಗ ಹಾಕಿ ತೆರಳಿದ್ದರು. ಅಣ್ಣಪ್ಪ ಪೂಜಾರಿ ಅವರಿಗೆ ಸೇರಿದ ಮೂಲ ಮನೆಗೆ ಒಂದು ತಿಂಗಳ ಬಳಕಿ ಮರಳಿ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ಮನೆಯಲ್ಲಿ ಸುಂಆರು 30 ಸಾವಿರ ರೂಪಾಯಿ ಮೌಲ್ಯದ ಪೂಜಾ ಸಾಮಗ್ರಿ ಹಾಗೂ ಗ್ರಹೋಪಯೋಗಿ ವಸ್ತುಗಳು ಇದ್ದು, ಅವುಗಳನ್ನು ಕಳವು ಮಾಡಿರುವುದು ಕಂಡು ಬಂದಿದೆ. ಕಳ್ಳರು ಮನೆಯ ಪೂರ್ವ ದಿಕ್ಕಿನಲ್ಲಿ ಇರುವ ಬಾಗಿಲ ಚಿಲಕವನ್ನು ಮುರಿದು ಒಳಗೆ ಪ್ರವೇಶಿಸಿದ್ದರು.
ಬಚ್ಚಲು ಮನೆಯಲ್ಲಿದ್ದ ತಾಮ್ರದ ಹಂಡೆ, ಕೊಡಪಾನ, ಅಡುಗೆ ಕೋಣೆಯಲ್ಲಿದ್ದ ಗ್ಯಾಸ್ ಲೈಟರ್ ಕೂಡ ಬಿಡದೆ ಹಿತ್ತಾಳೆಯ ನಾಲ್ಕು ಕಾಲುದೀಪ, ಜಾಗಂಟೆ, ಪೂಜಾ ಗಂಟೆ, ಆರತಿ ತಟ್ಟೆ ಹಾಗೂ ಕಾಣಿಕೆ ತುಂಬಿದ್ದ ಮೂರು ಡಬ್ಬಗಳನ್ನು ಕೂಡ ಹೊತ್ತೊಯ್ದಿದ್ದಾರೆ.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.
Watch on YouTube

