Dailyhunt Logo
  • Light mode
    Follow system
    Dark mode
    • Play Story
    • App Story
ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿದವರ ಮಾಹಿತಿ ನೀಡಿ : ಉಡುಪಿ ಜಿಲ್ಲಾಡಳಿತದ ಸೂಚನೆ

ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿದವರ ಮಾಹಿತಿ ನೀಡಿ : ಉಡುಪಿ ಜಿಲ್ಲಾಡಳಿತದ ಸೂಚನೆ

News Next 2 weeks ago

ಡುಪಿ : ನೇಪಾಳ-ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಹಠಾತ್ ಭೀಕರ ಜಲಪ್ರಳಯ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲೆಯಿಂದ ಪ್ರವಾಸ ಅಥವಾ ಯಾತ್ರೆಗೆ ತೆರಳಿ ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವವರ ಮಾಹಿತಿ ಸಂಗ್ರಹಿಸಲು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದೆ.

ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಉಡುಪಿ ಜಿಲ್ಲೆಯ ನಿವಾಸಿಗಳನ್ನು ಸುರಕ್ಷಿತವಾಗಿ ಕರೆತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಅವರ ಕುಟುಂಬಸ್ಥರ ಅನುಕೂಲಕ್ಕಾಗಿ ಜಿಲ್ಲಾಮಟ್ಟದಲ್ಲಿ ತುರ್ತು ಸಹಾಯವಾಣಿ ತೆರೆಯಲಾಗಿದೆ.

ಸಂಕಷ್ಟದಲ್ಲಿರುವವರ ಕುಟುಂಬಸ್ಥರು ಅಥವಾ ಸಂಬಂಧಿಕರು ಅವರ ಹೆಸರು, ವಿಳಾಸ, ಪ್ರಸ್ತುತ ಇರುವ ನಿಖರ ಸ್ಥಳ, ಮೊಬೈಲ್ ಸಂಖ್ಯೆ ಹಾಗೂ ಅಗತ್ಯವಿರುವ ತುರ್ತು ನೆರವಿನ ವಿವರಗಳನ್ನು ಜಿಲ್ಲಾಡಳಿತಕ್ಕೆ ತಕ್ಷಣ ನೀಡುವಂತೆ ಸೂಚಿಸಲಾಗಿದೆ.

ಮಾಹಿತಿ ನೀಡಲು ಸಂಪರ್ಕಿಸಿ ಶುಲ್ಕರಹಿತ ಸಹಾಯವಾಣಿ: 1077, ದೂರವಾಣಿ: 0820-2574802, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಬಿಡುಗಡೆ ಮಾಡಿರುವ ಗೂಗಲ್ ಅರ್ಜಿ ನಮೂನೆ ಮೂಲಕವೂ ವಿವರಗಳನ್ನು ದಾಖಲಿಸಬಹುದು. ನೇಪಾಳದಲ್ಲಿ ನೆಲೆಸಿರುವ ಉಡುಪಿ ಜಿಲ್ಲೆಯ ಯಾವುದೇ ವ್ಯಕ್ತಿಯ ಕುರಿತು ಮಾಹಿತಿಯನ್ನು ವಿಳಂಬ ಮಾಡದೇ ತಿಳಿಸುವಂತೆ ಜಿಲ್ಲಾಧಿಕಾರಿಗಳ ಪ್ರಕರಣೆ ತಿಳಿಸಿದೆ.

Watch on YouTube

Dailyhunt
Disclaimer: This content has not been generated, created or edited by Dailyhunt. Publisher: News Next