Dailyhunt
ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರಿಗೆ ಭರ್ಜರಿ ಗುಡ್ ನ್ಯೂಸ್! ಏನಿದು 600 ಕೋಟಿ ಪ್ಲಾನ್? ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರಿಗೆ ಭರ್ಜರಿ ಗುಡ್ ನ್ಯೂಸ್! ಏನಿದು 600 ಕೋಟಿ ಪ್ಲಾನ್? ಇಲ್ಲಿದೆ ಮಾಹಿತಿ

News Next 1 week ago

ದಾವಣಗೆರೆ ಉಪಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್​ ನಡೆ ಅಲ್ಪಸಂಖ್ಯಾತರ ಕೆಂಗಣ್ಣಿಗೆ ಗುರಿಯಾಗಿರುವುದು ತಿಳಿದಿರುವ ವಿಚಾರ. ಇದೀಗ ಡ್ಯಾಮೇಜ್​ ಕಂಟ್ರೋಲ್​ಗೆ ಮುಂದಾಗಿರುವ ಕಾಂಗ್ರೆಸ್​ ಸರ್ಕಾರ ತನ್ನ ವೋಟ್​ ಬ್ಯಾಂಕ್​ ಭದ್ರಪಡಿಸಿಕೊಳ್ಳಲು ಮಾಸ್ಟರ್​ ಪ್ಲಾನ್​ ಮಾಡಿದೆ.

ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲ್ಪಸಂಖ್ಯಾತರು ವಾಸಿಸುವ ಕಾಲೋನಿಗಳ ಅಭಿವೃದ್ಧಿಗೆ ಬರೋಬ್ಬರಿ 600 ಕೋಟಿ ರೂಪಾಯಿಗಳ ಬೃಹತ್​ ಕಾಮಗಾರಿಗೆ ಹಸಿರು ನಿಶಾನೆ ತೋರಲಾಗಿದೆ.

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಕಾಲೋನಿಗಳಲ್ಲಿ ವಾಸಿಸುವ ಜನರು ಈ ಬೃಹತ್​ ಕ್ರಿಯಾ ಯೋಜನೆಯ ಲಾಭ ಪಡೆಯಲಿದ್ದಾರೆ. ಈ ಯೋಜನೆಯಡಿ ರಸ್ತೆಗಳ ಅಭಿವೃದ್ಧಿ, ಡ್ರೈನೇಜ್ ವ್ಯವಸ್ಥೆ, ಕುಡಿಯುವ ನೀರು ಸರಬರಾಜು, ವಿದ್ಯುತ್ ಸೌಕರ್ಯ, ಶಾಲಾ-ಕಾಲೇಜುಗಳು ಮತ್ತು ಆರೋಗ್ಯ ಕೇಂದ್ರಗಳ ನಿರ್ಮಾಣ ಸೇರಿದಂತೆ ಮೂಲಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ.

Karnataka heatwave : ಕರ್ನಾಟಕದಲ್ಲಿ ಹೀಟ್‌ವೇವ್ ನಿಯಂತ್ರಣಕ್ಕೆ ಹೊಸ ನೀತಿ ಜಾರಿ: ಸಾರ್ವಜನಿಕರಿಗೆ ಬಿಗ್ ರಿಲೀಫ್

ಈ ಬೃಹತ್​ ಕ್ರಿಯಾ ಯೋಜನೆಯ ಲಾಭವನ್ನು ರಾಜ್ಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ ಮತ್ತು ಸಿಖ್ ಸಮುದಾಯಗಳು ಪಡೆದುಕೊಳ್ಳಲಿವೆ. ಅಲ್ಪಸಂಖ್ಯಾತರು ವಾಸವಿರುವ ಕಾಲೋನಿಗಳನ್ನು ಮಾದರಿ ಕಾಲೋನಿಗಳನ್ನಾಗಿ ಮಾಡುವುದು ನಮ್ಮ ಉದ್ದೇಶ ಎಂದು ಸರ್ಕಾರ ಹೇಳಿದೆ. ರಾಜ್ಯ ಸರ್ಕಾರ ಘೋಷಿಸಿರುವ ಈ ಬಂಪರ್​ ಗಿಫ್ಟ್​ನಿಂದಾಗಿ ಅಲ್ಪಸಂಖ್ಯಾತ ಸಮುದಾಯದವರಲ್ಲಿ ಸಂತಸದ ಅಲೆ ಮೂಡಿದೆ.

Dailyhunt
Disclaimer: This content has not been generated, created or edited by Dailyhunt. Publisher: News Next