Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯದಲ್ಲಿ ಶುರು ವರುಣನ ಮಹಾಆರ್ಭಟ : ನಾಳೆಯಿಂದ ರಾಜಧಾನಿ ಸೇರಿದಂತೆ ಹಲವೆಡೆ ಭಾರೀ ಮಳೆ

ರಾಜ್ಯದಲ್ಲಿ ಶುರು ವರುಣನ ಮಹಾಆರ್ಭಟ : ನಾಳೆಯಿಂದ ರಾಜಧಾನಿ ಸೇರಿದಂತೆ ಹಲವೆಡೆ ಭಾರೀ ಮಳೆ

News Next 1 week ago

ರಾಜ್ಯಾದ್ಯಂತ ಮುಂಗಾರು ಮಾರುತಗಳು ತೀವ್ರಗೊಂಡಿದ್ದು, ಮುಂದಿನ ಐದು ದಿನಗಳ ಕಾಲ ಕರ್ನಾಟಕದಾದ್ಯಂತ ವರುಣನ ಅಬ್ಬರ ಜೋರಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಭಾಗಗಳಲ್ಲಿ ಗಾಳಿ-ಮಳೆಯ ತೀವ್ರತೆ ಹೆಚ್ಚಿರಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಐಎಂಡಿ ತಿಳಿಸಿದೆ.

ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಜೂನ್ 9ರವರೆಗೆ ರಾಜ್ಯದ ಹಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಪ್ರಮುಖ 11 ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಗೆ ಅಧಿಕಾರಿಗಳು 'ಆರೆಂಜ್ ಅಲರ್ಟ್' ಘೋಷಿಸಿದ್ದಾರೆ.
ವರದಿಯ ಪ್ರಕಾರ, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇರುವುದರಿಂದ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಇದು ಕೈಗೆ ಬಂದ ಬೆಳೆಗಳನ್ನು ನಾಶಪಡಿಸುವ ಸಾಧ್ಯತೆ ಇರುವುದರಿಂದ ಕೃಷಿ ಚಟುವಟಿಕೆಗಳ ವಿಷಯದಲ್ಲಿ ಜಾಗರೂಕರಾಗಿರಲು ಹವಾಮಾನ ತಜ್ಞರು ಸಲಹೆ ನೀಡಿದ್ದಾರೆ.ಇನ್ನೊಂದೆಡೆ, ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲೂ ಮಳೆ ಮುಂದುವರಿಯಲಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ತೀವ್ರಗೊಳ್ಳಲಿರುವುದರಿಂದ ಯಾವುದೇ ಕಾರಣಕ್ಕೂ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಕಟ್ಟುನಿಟ್ಟಿನ ಸೂಚನೆ ರವಾನಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಮುಂದಿನ ವಾರದಿಂದ ಮಳೆಯ ಪ್ರಮಾಣ ಮತ್ತಷ್ಟು ಏರಿಕೆಯಾಗಲಿದೆ. ನಗರದ ಹಲವು ಪ್ರದೇಶಗಳಲ್ಲಿ ಸಂಜೆ ಮತ್ತು ರಾತ್ರಿಯ ವೇಳೆ ಮಿಂಚು-ಗಾಳಿ ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

The great monsoon season has begun in the state Heavy rains in many places including the capital from tomorrow

Dailyhunt
Disclaimer: This content has not been generated, created or edited by Dailyhunt. Publisher: News Next