Dailyhunt Logo
  • Light mode
    Follow system
    Dark mode
    • Play Story
    • App Story
ಉಡುಪಿ: ಮಲ್ಪೆ ಬಂದರಿನಲ್ಲಿ ಬೆಳ್ಳಂಬೆಳಗ್ಗೆ ಚೂರಿ ಇರಿದು ಮೀನುಗಾರ ಕಾರ್ಮಿಕನ ಹತ್ಯೆ

ಉಡುಪಿ: ಮಲ್ಪೆ ಬಂದರಿನಲ್ಲಿ ಬೆಳ್ಳಂಬೆಳಗ್ಗೆ ಚೂರಿ ಇರಿದು ಮೀನುಗಾರ ಕಾರ್ಮಿಕನ ಹತ್ಯೆ

News Next 1 day ago

ಡುಪಿ: ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ನಡೆದ ಚೂರಿ ಇರಿತದ ಘಟನೆಯಲ್ಲಿ ಮೀನುಗಾರ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ. ಮೃತನನ್ನು ಅಭಿಷೇಕ್ (24) ಎಂದು ಗುರುತಿಸಲಾಗಿದೆ.

ಮೃತ ಅಭಿಷೇಕ್ ಹಾಗೂ ಆರೋಪಿ ಇಬ್ಬರೂ ಚಿಕ್ಕಮಗಳೂರು ಜಿಲ್ಲೆಯ ನಿವಾಸಿಗಳಾಗಿದ್ದು, ಉದ್ಯೋಗದ ನಿಮಿತ್ತ ಮಲ್ಪೆ ಬಂದರಿಗೆ ಆಗಮಿಸಿ ಶ್ರೀ ಮಹಾಕಾಳಿ ಹೆಸರಿನ ಮೀನುಗಾರಿಕಾ ಬೋಟ್‌ನಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.

ಮಾಹಿತಿಯ ಪ್ರಕಾರ, ಇಂದು ಮುಂಜಾನೆ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ತೀವ್ರಗೊಂಡಿದ್ದು, ಆರೋಪಿ ಏಕಾಏಕಿ ಚೂರಿಯಿಂದ ಅಭಿಷೇಕ್‌ಗೆ ಇರಿದಿದ್ದಾನೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ಅಭಿಷೇಕ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿದ ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆಗೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

ಈ ದುರ್ಘಟನೆಯಿಂದ ಮಲ್ಪೆ ಬಂದರು ಪ್ರದೇಶದ ಕಾರ್ಮಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: News Next