Dailyhunt Logo
  • Light mode
    Follow system
    Dark mode
    • Play Story
    • App Story
Karnataka Bandh: ರಾಜ್ಯಾದ್ಯಂತ ನಾಳೆ ಶಾಲೆಗಳಿಗೆ ರಜೆನಾ? ಶಿಕ್ಷಣ ಸಚಿವರು ಹೇಳಿದ್ದೇನು?

Karnataka Bandh: ರಾಜ್ಯಾದ್ಯಂತ ನಾಳೆ ಶಾಲೆಗಳಿಗೆ ರಜೆನಾ? ಶಿಕ್ಷಣ ಸಚಿವರು ಹೇಳಿದ್ದೇನು?

ಬೆಂಗಳೂರು: ಕನ್ನಡಪರ ಸಂಘಟನೆಗಳು ನಾಳೆ (ಮಾ. 22ರಂದು) ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಇಂದಿನಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿವೆ. ಮತ್ತೊಂದೆಡೆ ಶಾಲೆಗಳಿಗೆ ರಜೆ ಇರುತ್ತಾ? ಬಂದ್ ಹಿನ್ನೆಲೆ ನಾಳೆ ಪರೀಕ್ಷೆಗಳಿದ್ದರೆ ಅವು ಪೋಸ್ಟ್ ಪೋನ್ ಆಗ್ತಾವಾ ಎಂಬುದು ಎಲ್ಲರಲ್ಲೂ ಗೊಂದಲ ಮೂಡಿದೆ.
ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.

ನಾಳೆ ಕರ್ನಾಟಕ ಬಂದ್ ಹಿನ್ನೆಲೆ, ಶಾಲೆ ಬಂದ್ ಆಗುವ ವಿಚಾರವಾಗಿ ಮಾತನಾಡಿದ ಅವರು, ಈವರೆಗೆ ಶಾಲೆ ಬಂದ್ ಮಾಡುವ ನಿರ್ಧಾರ ಮಾಡಿಲ್ಲ. ಮಧ್ಯಾಹ್ನ ಗೃಹ ಸಚಿವ ಹಾಗೂ ಸಾರಿಗೆ ಸಚಿವರ ಜೊತೆ ಸಭೆ ಮಾಡ್ತೇನೆ. ಅವರು ಏನು ಹೇಳ್ತಾರೆ ಅದರ ಮೇಲೆ ನಿರ್ಧಾರ ಪ್ರಕಟ ಮಾಡ್ತೇನೆ ಎಂದು ಹೇಳಿದ್ದಾರೆ.

ಸಾರಿಗೆ ಹಾಗೂ ಭದ್ರತೆ ಇಲ್ಲದೆ ಶಾಲೆ ಓಪನ್ ಮಾಡೋಕೆ ಆಗಲ್ಲ. ನಾಳೆ ಮೌಲ್ಯಾಂಕನ ಪರೀಕ್ಷೆ ಇದೆ. ಹೀಗಾಗಿ ಮುಂದೂಡಲು ನಾವು ಸಿದ್ಧವಾಗಿದ್ದೇವೆ. ಆದರೆ ಗೃಹ ಇಲಾಖೆ ಹಾಗೂ ಸಾರಿಗೆ ಇಲಾಖೆಯ ನಿರ್ಧಾರ ನೋಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಸಚಿವರು ಶಾಲೆಗಳಿಗೆ ರಜೆ ಘೋಷಣೆ ಬಗ್ಗೆ ಇನ್ನೂ ಸ್ಪಷ್ಟವಾದ ಮಾಹಿತಿ ನೀಡಿಲ್ಲ. ಆದರೆ, ಗೃಹ ಸಚಿವ ಹಾಗೂ ಸಾರಿಗೆ ಸಚಿವರ ಜೊತೆ ಸಭೆ ಬಳಿಕ ಸ್ಪಷ್ಟತೆ ಸಿಗಲಿದೆ ಎಂದು ತಿಳಿಸಿದ್ದಾರೆ.


ಇತ್ತೀಚೆಗಷ್ಟೇ ಬೆಳಗಾವಿಯಲ್ಲಿ ಕರ್ನಾಟಕದ ಸಾರಿಗೆ ಇಲಾಖೆ KSRTC ಬಸ್‌ ನಲ್ಲಿ ಕಂಡಕ್ಟರ್‌ ಮತ್ತು ಪ್ರಯಾಣಿಕನೊಂದಿಗೆ ನಡೆದಿದ್ದ ಗಲಾಟೆ ಪ್ರಕರಣ ತಾರಕಕ್ಕೇರಿತ್ತು. ಅಂದು ಬಸ್ ನಿರ್ವಾಹಕನ ಮೇಲೆ ಮರಾಠಿ ಪುಂಡರು ದಾಳಿ ಮಾಡಿದ್ದರು. ಅಲ್ಲದೆ ಕರ್ನಾಟಕದ ಬಸ್ ಚಾಲಕರ ಮುಖಕ್ಕೆ ಮರಾಠಿ ಪುಂಡರು ಮಸಿ ಬಳಿದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ ಎಂದು ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.

ಇದೀಗ ಇಂತಹ ಪುಂಡಾಟಿಕೆ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಕನ್ನಡಿಗರ ವಿರುದ್ಧ ದೌರ್ಜನ್ಯ ವೆಸಗುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ತಡೆಯಲು ಸರ್ಕಾರದ ಮೇಲೆ ಒತ್ತಡ ಹಾಕಲು ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.


ಮಾರ್ಚ್‌ 22ರಂದು ಅಖಂಡ ಕರ್ನಾಟಕ ಬಂದ್ ಘೋಷಣೆ ಮಾಡಲಾಗಿದ್ದು, ಈ ಕುರಿತು ಇಂದು ನಡೆದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಇಂದು ಕರ್ನಾಟಕ ಬಂದ್ ಬಗ್ಗೆ ತೀರ್ಮಾನ ಮಾಡಲು ವಾಟಾಳ್ ನಾಗರಾಜ್ ಸಭೆ ಕರೆದಿದ್ದರು. ಈ ವೇಳೆ ಹಲವು ಸಂಘಟನೆಗಳ ಮುಖಂಡರು ಸಭೆಯಲ್ಲಿ ಹಾಜರಿದ್ದರು. ಸಭೆ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್ ಅವರು, "ಯಾವುದೇ ಕಾರಣಕ್ಕೂ ಬಂದ್ ವಾಪಸ್ ಪಡೆಯುವುದಿಲ್ಲ, ಬಂದ್ ಮಾಡಿಯೇ ಮಾಡುತ್ತೇವೆ," ಎಂದು ಘೋಷಣೆ ಮಾಡಿದ್ದಾರೆ.

'ಹೊರರಾಜ್ಯ, ಸಂಸತ್ ಗಮನ ಸೆಳೆಯಲು ಮಾರ್ಚ್ 22ರಂದು ಕರ್ನಾಟಕ ಬಂದ್ ಮಾಡುತ್ತಿದ್ದೇವೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಹೊಡೆಯುತ್ತಿದ್ದಾರೆ. ಮಹಾರಾಷ್ಟ್ರದವರು ಕನ್ನಡಿಗರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಮರಾಠಿ ಪುಂಡರು ಕೆಎಸ್‌ಆರ್‌ಟಿಸಿ ಚಾಲಕ, ನಿರ್ವಾಕರ ಮುಖಕ್ಕೆ ಮಸಿ ಬಳಿಯುವುದಲ್ಲದೆ ಹಲ್ಲೆ ಕೂಡ ಮಾಡಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುತ್ತದೆ ಎಂದು ಹೇಳಿದ್ದಾರೆ.
Dailyhunt
Disclaimer: This content has not been generated, created or edited by Dailyhunt. Publisher: News18 Kannada