Dailyhunt
ಬ್ರಹ್ಮಾವರ: ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಛಾಯಾಗ್ರಾಹಕ ಅಶೋಕ್ ಶೆಟ್ಟಿ ಇನ್ನಿಲ್ಲ

ಬ್ರಹ್ಮಾವರ: ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಛಾಯಾಗ್ರಾಹಕ ಅಶೋಕ್ ಶೆಟ್ಟಿ ಇನ್ನಿಲ್ಲ

( ನ್ಯೂಸ್ ಕಡಬ ) newskadaba, ಮಂಗಳೂರು ಜು .06: ಮದುವೆ ಕಾರ್ಯಕ್ರಮವೊಂದಕ್ಕೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಕಂಟೈನರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕುಂದಾಪುರದ ಹಿರಿಯ ಛಾಯಾಗ್ರಾಹಕ ಹೇರೂರು ಅಶೋಕ್ ಶೆಟ್ಟಿ (56) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಸಾವನ್ನಪ್ಪಿದ್ದಾರೆ.

ಪುತ್ರ ಪನ್ನಗ (24) ಹಾಗೂ ಸ್ನೇಹಿತ ಕುಮಾರ್ ಜೊತೆ ಬೆಂಗಳೂರಿಗೆ ಮದುವೆ ಕಾರ್ಯಕ್ರಮವೊಂದರ ಚಿತ್ರೀಕರಣಕ್ಕಾಗಿ ಕಾರಿನಲ್ಲಿ ತೆರಳಿ ಹಿಂದಿರುಗುತ್ತಿದ್ದ ವೇಳೆ ತುಮಕೂರು ಸಮೀಪ ಕಾರು ಅಪಘಾತ ಸಂಭವಿಸಿದ್ದು, ಅಶೋಕ್ ಶೆಟ್ಟಿ ಹಾಗೂ ಪುತ್ರ ಪನ್ನಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದರು.

ಪನ್ನಗನ ಸ್ಥಿತಿ ಇನ್ನೂ ಕೂಡ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಅಶೋಕ್ ಶೆಟ್ಟಿ ಹಲವಾರು ಸಂಘಟನೆಗಳ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು ಹಾಗೂ ನಾವುಂದದಲ್ಲಿ ಮಾನಸ ಸ್ಟುಡಿಯೋ ಎನ್ನುವ ಯಶಸ್ವಿ ಸಂಸ್ಥೆಯನ್ನು ನಡೆಸುತ್ತಿದ್ದರು

Dailyhunt
Disclaimer: This content has not been generated, created or edited by Dailyhunt. Publisher: newskadaba.com