Dailyhunt Logo
  • Light mode
    Follow system
    Dark mode
    • Play Story
    • App Story
. ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ಜೈಪುರದಲ್ಲಿ ತುರ್ತು ಭೂಸ್ಪರ್ಶ

. ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ಜೈಪುರದಲ್ಲಿ ತುರ್ತು ಭೂಸ್ಪರ್ಶ

(ನ್ಯೂಸ್‌ಕಡಬ) newskadaba.com, ಮೇ.28:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ವಿಮಾನ ರಾಜಸ್ಥಾನದ ಜೈಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಭಾರೀ ಆತಂಕಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದ ವೇಳೆ ಘಟನೆ ನಡೆದಿದೆ.

ವಿಶೇಷ ವಿಮಾನದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಚಿವರಾದ ಕೆ.ಜೆ ಜಾರ್ಜ್, ಬೈರತಿ ಸುರೇಶ್, ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಇದ್ದರು.

Dailyhunt
Disclaimer: This content has not been generated, created or edited by Dailyhunt. Publisher: newskadaba.com