Dailyhunt Logo
  • Light mode
    Follow system
    Dark mode
    • Play Story
    • App Story

ಬೆಳ್ತಂಗಡಿ: ಕೊಕ್ಕಡ ಬಳಿ ಕಾರು-ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com, ಸೆ. 12. ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೊಕ್ಕಡ ಸಮೀಪ ಶನಿವಾರ ಸಂಭವಿಸಿದೆ.

ಧರ್ಮಸ್ಥಳದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಈ ಅಪಘಾತ ಸಂಭವಿಸಿದೆ.

ಕ್ಕಿಯ ರಭಸಕ್ಕೆ ಬಸ್ ಮತ್ತು ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಪ್ರಯಾಣಿಕರು ಹಾಗೂ ಕಾರಿನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಅಪಘಾತದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: newskadaba.com