Dailyhunt Logo
  • Light mode
    Follow system
    Dark mode
    • Play Story
    • App Story
ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ವಿಧಿವಶ

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ವಿಧಿವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಕೇಂದ್ರ ಮುಶಾವರ ಸದಸ್ಯರೂ, ದಕ್ಷಿಣ ಕನ್ನಡ ಜಿಲ್ಲಾ ಖಾಝಿಯೂ ಆದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ರವರು ನಿಧನರಾಗಿದ್ದಾರೆ.

ಕೆಲವು ಸಮಯದಿಂದ ಅನಾರೋಗಕ್ಕೀಡಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಮಂಗಳೂರು ಕೇಂದ್ರ ಜುಮಾ ಮಸ್ಜಿದ್‌ ನಲ್ಲಿ ಮೃತದೇಹದ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಖಾಝಿಯವರ ಕುಟುಂಬದ ಸದಸ್ಯರ ಜೊತೆ ಚರ್ಚಿಸಿದ ಬಳಿಕ ದಫನ ಕಾರ್ಯದ ಸ್ಥಳ ನಿಗದಿಪಡಿಸಲಾಗುವುದು ಎಂದು ಕೇಂದ್ರ ಜುಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: newskadaba.com