Dailyhunt Logo
  • Light mode
    Follow system
    Dark mode
    • Play Story
    • App Story

ಗಣೇಶ ವಿಗ್ರಹ ವಿಸರ್ಜನೆ ವೇಳೆ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಿ ಡಿಸಿ ಆದೇಶ

(ನ್ಯೂಸ್‌ ಕಡಬ) newskadaba.com, ಸೆ. 12.ಗಣೇಶೋತ್ಸವ ಹಾಗೂ ವಿಗ್ರಹ ವಿಸರ್ಜನಾ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಕಾನೂನು ಪಾಲನೆಯ ದೃಷ್ಟಿಯಿಂದ ಸೆ.14, 16 ಮತ್ತು 18ರಂದು ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸ್ವರೂಪ ಆದೇಶ ಹೊರಡಿಸಿದ್ದಾರೆ.

ಸೆ.14ರಂದು ಬೆಳಗ್ಗೆ 6ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸೆ.16ರಂದು ಅಪರಾಹ್ನ 2:00 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಉಡುಪಿ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಸೆ.18ರಂದು ಅಪರಾಹ್ನ 2:00 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಗಣೇಶ ವಿಸರ್ಜನೆ ನಡೆಯುವ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಗಂಗೊಳ್ಳಿ, ಕುಂದಾಪುರ ನಗರ ಹಾಗೂ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ದಿಷ್ಟ ಗ್ರಾಮಗಳಲ್ಲೂ ಈ ನಿಷೇಧ ಜಾರಿಯಲ್ಲಿರುತ್ತದೆ. ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಆದೇಶ ಜಾರಿಗೊಳಿಸಲಾಗಿದ್ದು, ನಿಗದಿತ ಅವಧಿಯಲ್ಲಿ ಪರಿಸರದ ಮದ್ಯದಂಗಡಿಗಳು, ಬಾರ್‌ಗಳು ಹಾಗೂ ಮದ್ಯ ಮಾರಾಟ ಮಾಡುವ ಇತರ ಸನ್ನದುಗಳಲ್ಲಿ ಮದ್ಯ ಮಾರಾಟ ಮಾಡದಂತೆ ಜಿಲ್ಲಾಧಿಕಾರಿಗಳು ಆದೇಶದಲ್ಲಿ ಸೂಚಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: newskadaba.com