Dailyhunt Logo
  • Light mode
    Follow system
    Dark mode
    • Play Story
    • App Story
ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನಾಚರಣೆ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನಾಚರಣೆ

(ನ್ಯೂಸ್ಕಡಬ) newskadaba.com . 30. ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಮತ್ತು ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ಶನಿವಾರದಂದು ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನಾಚರಣೆಯನ್ನು ಯಾದವಶ್ರೀ ಸಭಾಂಗಣದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕರಾಟೆ ಶಿಕ್ಷಕರಾದ ಶ್ರೀ ಯಾದವ ಬೀರಂತಡ್ಕ ಆಗಮಿಸಿ ಮೇಜರ್ ಧ್ಯಾನ್ ಚಂದ್ ಅವರ ಕುರಿತಾಗಿ ಮಾತನಾಡಿದರು.

ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಲಕ್ಷ್ಮೀಶ ಗೌಡ ಆರಿಗ ಮಾತನಾಡಿ, ಮೇಜರ್ ಧ್ಯಾನ್ ಚಂದ್ ಅವರ ಆಟದ ವೈಶಿಷ್ಟ್ಯ ಹಾಗೂ ಅವರಲ್ಲಿರುವ ದೇಶಭಕ್ತಿಯ ಕುರಿತಾಗಿ ತಿಳಿಸಿದರು.

ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಶಿವಪ್ರಸಾದ್ ರೈ ಮೈಲೇರಿ ಸಭಾಧ್ಯಕ್ಷತೆಯನ್ನು ವಹಿಸಿ ಪ್ರತಿಯೊಬ್ಬ ಕ್ರೀಡಾಪಟುವಿನಲ್ಲಿ ಪರಿಶ್ರಮ, ಏಕಾಗ್ರತೆ, ತಂಡದ ಒಗ್ಗಟ್ಟು, ಶಿಸ್ತು ಇದ್ದಾಗ ಕ್ರೀಡೆಯಲ್ಲಿ ಯಶಸ್ವಿಯಾಗಲು ಸಾಧ್ಯ. ಸೋಲು ಗೆಲುವನ್ನು ಕ್ರೀಡೆಯಲ್ಲಿ ಹಾಗೂ ಜೀವನದಲ್ಲಿ ಸಮಾನವಾಗಿ ಸ್ವೀಕರಿಸಿದಾಗ ಯಶಸ್ವಿ ಜೀವನವನ್ನು ನಡೆಸಲು ಸಾಧ್ಯ ಎಂದು ಅಧ್ಯಕ್ಷೀಯ ನುಡಿಗಳನ್ನಡಿದರು. ವೇದಿಕೆಯಲ್ಲಿ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ಶ್ರೀ ಅಜಿತ್ ರೈ ಆರ್ತಿಲ, ಆಂಗ್ಲ ಮಾಧ್ಯಮ ವಿಭಾಗದ ಮುಖ್ಯ ಗುರುಗಳಾದ ಶ್ರೀ ವಸಂತ.ಕೆ ಹಾಗೂ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶೈಲಶ್ರೀ ರೈ ಎಸ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಕುಮಾರಿ ದೀಕ್ಷಿತಾ ಕೆ ಸ್ವಾಗತಿಸಿ, ಶ್ರೀಮತಿ ಮಮತಾ ಎಸ್ ವಂದಿಸಿದರು. ಶ್ರೀಮತಿ ಸೌಮ್ಯ ಕೆ.ಎ ಕಾರ್ಯಕ್ರಮವನ್ನು ನಿರೂಪಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: newskadaba.com