Dailyhunt Logo
  • Light mode
    Follow system
    Dark mode
    • Play Story
    • App Story

ಕೆಇಎ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ

(ನ್ಯೂಸ್‌ ಕಡಬ) newskadaba.com, ಅ . 20 . ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಕ್ಟೋಬರ್ 4ರಂದು ನಡೆಸಿದ್ದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳ ಆಧಾರದ ಮೇಲೆ ತಾತ್ಕಾಲಿಕ ಫಲಿತಾಂಶವನ್ನು ಸೋಮವಾರ (ಅ.19) ಅಧಿಕೃತವಾಗಿ ಪ್ರಕಟಿಸಿದೆ.

ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಪ್ರಕಟಿತ ತಾತ್ಕಾಲಿಕ ಫಲಿತಾಂಶದ ಕುರಿತಾದ ಯಾವುದೇ ಆಕ್ಷೇಪಣೆಗಳನ್ನು ಅಕ್ಟೋಬರ್ 22ರ ಬೆಳಿಗ್ಗೆ 10:00 ಗಂಟೆಯೊಳಗೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಪೂರಕ ದಾಖಲೆಗಳಿಲ್ಲದ ಹಾಗೂ ಕೀ ಉತ್ತರಗಳಿಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಈ ಹಂತದಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಕೆಇಎ ಸ್ಪಷ್ಟಪಡಿಸಿದೆ.

Dailyhunt
Disclaimer: This content has not been generated, created or edited by Dailyhunt. Publisher: newskadaba.com