Dailyhunt Logo
  • Light mode
    Follow system
    Dark mode
    • Play Story
    • App Story
ಮಾಣಿ-ಮೈಸೂರು ರಸ್ತೆಗೆ ಉರುಳಿದ ಬೃಹತ್ ಮರ: ಸಂಚಾರ ಸಂಪೂರ್ಣ ಬಂದ್

ಮಾಣಿ-ಮೈಸೂರು ರಸ್ತೆಗೆ ಉರುಳಿದ ಬೃಹತ್ ಮರ: ಸಂಚಾರ ಸಂಪೂರ್ಣ ಬಂದ್

(ನ್ಯೂಸ್ಕಡಬ) newskadaba.com, ಜು.07 ಮಂಗಳವಾರ ಬೆಳಿಗ್ಗೆ ಸುರಿದ ಭಾರೀ ಗಾಳಿ-ಮಳೆಗೆ ಬಂಟ್ವಾಳ ತಾಲೂಕಿನ ಮಾಣಿ ಸಮೀಪ ಮಾಣಿ-ಮೈಸೂರು ರಸ್ತೆಗೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ರಸ್ತೆ ಸಂಚಾರ ಕೆಲಕಾಲ ಸಂಪೂರ್ಣ ಅಸ್ತವ್ಯಸ್ತಗೊಂಡಿತು.ವಿದ್ಯುತ್ ಕಂಬಗಳು ತುಂಡಾಗಿ ಬಿದ್ದಿವೆ.

ಮಾಣಿ ಪಟ್ಲ ಕೋಡಿ ಎಂಬಲ್ಲಿ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಇದರಿಂದ ಬೆಳಿಗ್ಗೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು, ಉದ್ಯೋಗಕ್ಕೆ ಹಾಗೂ ವಿವಿಧ ಕೆಲಸಗಳಿಗೆ ತೆರಳುತ್ತಿದ್ದ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸಿದರು.

ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ವಾಹನಗಳನ್ನು ಕೊಡಾಜೆ ಗಡಿ-ಬೊಲ್ಲುಕಲ್ಲು ರಸ್ತೆಯ ಮೂಲಕ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಪರ್ಯಾಯ ಮಾರ್ಗದಲ್ಲಿ ಸಂಚರಿಸಲಾಯಿತು. ಬಳಿಕ ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮರವನ್ನು ತೆರವುಗೊಳಿಸುವ ಕಾರ್ಯ ಕೈಗೊಂಡು ಸಂಚಾರವನ್ನು ಪುನಃ ಸುಗಮಗೊಳಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: newskadaba.com