( ನ್ಯೂಸ್ ಕಡಬ) newskadaba.com ತ್ರಿಪುರಾ ಅ. 29: ತನ್ನನ್ನು ಮದುವೆಯಾಗಲು ನಿರಾಕರಿಸಿದ ಯುವಕನ ಮೇಲೆ ಯುವತಿಯೊಬ್ಬಳು ಆಯಸಿಡ್ ಎರಚಿದ ಘಟನೆ ತ್ರಿಪುರಾದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 27 ವರ್ಷದ ಯುವತಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತನ್ನ ಬಾಯ್‍ಫ್ರೆಂಡ್ ಬೇರೊಬ್ಬಳ ಜೊತೆ ಸಂಬಂಧ ಹೊಂದಿದ್ದ ಸಿಟ್ಟಿನಿಂದ ಆಕೆ ಈ ಕೃತ್ಯ ಎಸಗಿದ್ದಾಳೆ.
ಆಯಸಿಡ್ ದಾಳಿಗೊಳಗಾದ ಯುವಕನನ್ನು ಅಗರ್ತಲಾ ಸರ್ಕಾರಿ ಮೆಡಿಕಲ್ ಕಾಲೇಜ್ ಹಾಗೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯುವಕನ ಮೂಗು ಹಾಗೂ ಕಣ್ಣುಗಳಿಗೆ ಗಂಭೀರ ಗಾಯಗಳಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂಬುದಾಗಿ ವರದಿಯಾಗಿದೆ.

