Dailyhunt Logo
  • Light mode
    Follow system
    Dark mode
    • Play Story
    • App Story
ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ ಮೂವರು ದರ್ಶನ್ ಅಭಿಮಾನಿಗಳ ಬಂಧನ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ ಮೂವರು ದರ್ಶನ್ ಅಭಿಮಾನಿಗಳ ಬಂಧನ

(ನ್ಯೂಸ್‌ ಕಡಬ) newskadaba.com, ಜು.02: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಸಂದೀಪ್‌ಗೆ ಬೆದರಿಕೆ ಹಾಕಿದ ಆರೋಪದ ಮೇಲೆ ನಟ ದರ್ಶನ್ ಅಭಿಮಾನಿಗಳಾದ ಸುಹಾಸ್, ವೇಣು ಮತ್ತು ಪುನೀತ್ ಎಂಬ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಲ್ಲಿ ಒಬ್ಬನಾದ ಪುನೀತ್ ,ಕೊಲೆಯ ಬಳಿಕ ಶವ ವಿಲೇವಾರಿ ಮಾಡಲು ಸಂದೀಪ್‌ಗೆ ಸ್ಕಾರ್ಪಿಯೋ ಕಾರು ನೀಡಿದ್ದ ಹಾಗೂ ನಂತರ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದ ಪ್ರಮುಖ ಸಾಕ್ಷಿಯಾಗಿದ್ದಾನೆ.ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆತಂದಿಲ್ಲ ಎಂದು ಸುಳ್ಳು ಹೇಳಿಕೆ ನೀಡುವಂತೆ ಸಂದೀಪ್‌ ಮೇಲೆ ಪುನೀತ್ ಒತ್ತಡ ಹೇರಿದ್ದ.

ಈ ಬಗ್ಗೆ ಸಂದೀಪ್ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದ ಬೆನ್ನಲ್ಲೇ ಪೊಲೀಸರು ಎಫ್‌ಐಆರ್ ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ.

ಅಭಿಮಾನಿಗಳ ಈ ಸಾಕ್ಷ್ಯನಾಶ ಸಂಚಿನಿಂದಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಗ್ಯಾಂಗ್‌ಗೆ ಕಾನೂನು ಸಂಕಷ್ಟ ಮತ್ತು ಜೈಲು ವಾಸದ ಭೀತಿ ಇನ್ನಷ್ಟು ಹೆಚ್ಚಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: newskadaba.com