Dailyhunt Logo
  • Light mode
    Follow system
    Dark mode
    • Play Story
    • App Story
ಯುವಶಕ್ತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿ- ಎಂ.ಎ ಗಫೂರ್

ಯುವಶಕ್ತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿ- ಎಂ.ಎ ಗಫೂರ್

(ನ್ಯೂಸ್ಕಡಬ) newskadaba.com . 30. ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‍ ಚಂದ್ ಅವರು ತಮ್ಮ ಅಪ್ರತಿಮ ಕ್ರೀಡಾ ಸಾಧನೆಯ ಮೂಲಕ ದೇಶಕ್ಕೆ ಸ್ವರ್ಣದ ಗೌರವ ತಂದುಕೊಟ್ಟು ಭಾರತೀಯ ಕ್ರೀಡಾ ಇತಿಹಾಸದಲ್ಲಿ ಅಧ್ಯಾಯ ನಿರ್ಮಿಸಿದ್ದಾರೆ. ಅವರು ನಿರ್ಮಿಸಿದಂತಹ ಇತಿಹಾಸವನ್ನು ಇಂದಿನ ಯುವಜನತೆ ತಮ್ಮ ಪ್ರತಿಭೆ, ಪರಿಶ್ರಮದ ಮೂಲಕ ಮರುನಿರ್ಮಿಸಬೇಕು.

ಯುವಜನರು ದೇಶದ ಆಸ್ತಿ. ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ಇಂದಿನವರೆಗೂ ಯುವ ಜನತೆ ಕ್ರೀಡಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಮತ್ತು ಸಾಮಥ್ರ್ಯವನ್ನು ಪ್ರದರ್ಶಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ದೇಶದ ಅಭಿವೃದ್ಧಿಯಲ್ಲಿ ಯುವಶಕ್ತಿಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು.
ಅವರು ಶನಿವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮತ್ತು ವಿ. ಒನ್. ಅಕ್ವಾ ಸೆಂಟರ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‍ ಚಂದ್ ಹುಟ್ಟುಹಬ್ಬದ ಪ್ರಯುಕ್ತ ನಗರದ ಎಮ್ಮೆಕೆರೆ ಅಂತರಾಷ್ಟ್ರೀಯ ಈಜುಕೊಳದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈಜು ಕ್ರೀಡೆ ದೈಹಿಕ ಸಾಮರ್ಥ್ಯವನ್ನು ವೃದ್ಧಿಸುವುದರ ಜೊತೆಗೆ ಮಾನಸಿಕ ಒತ್ತಡ ಹಾಗೂ ಸಮಸ್ಯೆಗಳನ್ನು ದೂರಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಯುವಜನರಲ್ಲಿ ಈಜು ಸೇರಿದಂತೆ ವಿವಿಧ ಕ್ರೀಡೆಗಳ ಬಗ್ಗೆ ಆಸಕ್ತಿ ಬೆಳೆಸುವುದು ಅಗತ್ಯ ಎಂದು ಅವರು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಮಾತನಾಡಿ, ಇಂದಿನ ಮಕ್ಕಳು ಹೆಚ್ಚಿನ ಸಮಯವನ್ನು ಮೊಬೈಲ್ ಬಳಕೆಯಲ್ಲಿ ಕಳೆಯುತ್ತಿರುವ ಸಂದರ್ಭದಲ್ಲಿ, ಅವರನ್ನು ಕ್ರೀಡೆಯತ್ತ ಸೆಳೆಯುವುದು ಅಗತ್ಯವಾಗಿದೆ. ಈಜು ಕ್ರೀಡೆಯಂತಹ ಚಟುವಟಿಕೆಗಳು ಮಕ್ಕಳ ದೈಹಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಆತ್ಮವಿಶ್ವಾಸ, ಏಕಾಗ್ರತೆ ಮತ್ತು ಶಿಸ್ತನ್ನು ಬೆಳೆಸುವಲ್ಲಿ ಸಹಕಾರಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಶಾಹಿದ್ ತೆಕ್ಕಿಲ್, ಮಾಜಿ ಕಾರ್ಪೊರೇಟರ್ ವೇದಾವತಿ, ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಶೆಟ್ಟಿ, ಮಾಸ್ಟರ್ಸ್ ಅಥ್ಲೆಟ್ಸ್ ಜಗದೀಶ್ ಶೆಟ್ಟಿ, ಸರ್ಫಿಂಗ್ ಕ್ಲಬ್ ಪದ್ಮಾನಂದ ನಾಯಕ್, ವೆಯ್ಟ್ ಲಿಫ್ಟಿಂಗ್ ಅಸೋಸಿಯೇಷನ್ ಅಧ್ಯಕ್ಷ ಉಮೇಶ್ ಗಟ್ಟಿ, ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಸತೀಶ್ ಶೆಟ್ಟಿ, ಕ್ರೀಡಾ ತರಬೇತುದಾರ ಸಾಜಿದ್ ಉಳ್ಳಾಲ, ವಿ.ಒನ್ ಅಕ್ವಾ ಸೆಂಟರ್ ನಿರ್ದೇಶಕ ನವೀನ್ ಮತ್ತಿತರರು ಉಪಸ್ಥಿತರಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ ಸ್ವಾಗತಿಸಿ, ವಿನೋದ್ ಕುಮಾರ್ ನಿರೂಪಿಸಿದರು. ಇದೇ ಸಂದರ್ಭದಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಜಿಲ್ಲೆಯ ಕ್ರೀಡಾಪಟುಗಳಿಗೆ ಕ್ರೀಡಾ ಕಿಟ್‍ ಗಳನ್ನು ವಿತರಿಸಲಾಯಿತು.

Dailyhunt
Disclaimer: This content has not been generated, created or edited by Dailyhunt. Publisher: newskadaba.com