Dailyhunt Logo
  • Light mode
    Follow system
    Dark mode
    • Play Story
    • App Story
*ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಮುಂದಿನ 3 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ವರುಣಾರ್ಭಟ ಎಚ್ಚರಿಕೆ*

*ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಮುಂದಿನ 3 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ವರುಣಾರ್ಭಟ ಎಚ್ಚರಿಕೆ*

Pragativahini 1 week ago

ಪ್ರಗತಿವಾಹಿನಿ ಸುದ್ದಿ: ಕಳೆದ ಮೂರು ದಿನಗಳಿಂದ ಬಿಸ ಬೇಗೆಯಿಂದ ತತ್ತರಿಸುತ್ತಿದ್ದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ಬಿರುಗಾಳಿ, ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಗುಂಡಿ ಬಿದ್ದ ರಸ್ತೆಗಳಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡಬೇಕಾದ ಸ್ಥಿತಿ ಎದುರಾಗಿದೆ.

ಮುಂದಿನ ಮೂಈರು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಲಿದ್ದು, ರಾಜ್ಯದಾದ್ಯಂತ ಮೇ 31 ರವರೆಗೆ ಭಾರಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಗುಡು, ಸಿಡಿಲು ಸಹಿತ ಭಾಅರಿ ಮಳೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದ ಮಾದರಿ ತೀವ್ರ ಗಾಳಿ ಬೀಸಲಿದೆ ಎಣ್ದು ಎಚ್ಚರಿಸಲಾಗಿದೆ.

ಮೇ 29 ರಿಂದ ಮೇ 31: ಮುಂದಿನ ಮೂರು ದಿನಗಳ ಕಾಲ ಈ ವಲಯಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜೂನ್ 1 ರಿಂದ ಜೂನ್ 3: ಯಾವುದೇ ಹವಾಮಾನ ಎಚ್ಚರಿಕೆಗಳು ಇರುವುದಿಲ್ಲ.

ಉತ್ತರ ಒಳನಾಡಿನಲ್ಲಿ ಮುಂದಿನ 2 ದಿನ ಹೈ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತು ಮೇ 29 ರಂದು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಹವಾಮಾನ ತೀವ್ರಗೊಳ್ಳಲಿದ್ದು, ಆರಂಭದ ಎರಡು ದಿನಗಳ ಕಾಲ ಸಿಡಿಲು ಬಿರುಗಾಳಿ ಅಪ್ಪಳಿಸಲಿದೆ. ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಜಾರಿಯಲ್ಲಿರಲಿದೆ. ಮೇ 30 ಮತ್ತು ಮೇ 31: ವಾತಾವರಣದ ತೀವ್ರತೆ ಕೊಂಚ ತಗ್ಗಲಿದ್ದು, ಯೆಲ್ಲೋ ಅಲರ್ಟ್ ಘೋಷಿದಲಾಗಿದೆ. ಜೂನ್ 1 ರಿಂದ ಜೂನ್ 3ರವರೆಗೆ ಮಳೆಯ ಅಬ್ಬರ ಶಾಂತವಾಗಲಿದೆ.

ಕರಾವಳಿ ಕರ್ನಾಟಕದಲ್ಲಿ 4 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 28 ರಿಂದ ಮೇ 31ರವರೆಗೆ ಕರಾವಳಿಯ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ.

*ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್*

Dailyhunt
Disclaimer: This content has not been generated, created or edited by Dailyhunt. Publisher: Pragativahini