Dailyhunt Logo
  • Light mode
    Follow system
    Dark mode
    • Play Story
    • App Story
*ದೂಧಗಂಗಾ, ವೇದಗಂಗಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ*

*ದೂಧಗಂಗಾ, ವೇದಗಂಗಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ*

Pragativahini 1 week ago

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಭಾಗ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನಲ್ಲಿ ಪ್ರವಾಹದ ಭೀತಿ ಎದುರಾಗಿದೆ

ಜಿಲ್ಲೆಯ ಪ್ರಮುಖ ನದಿಗಳಾದ ದೂದಗಂಗಾ ಮತ್ತು ವೇದಗಂಗಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಮೂರು ಪ್ರಮುಖ ಸಂಪರ್ಕ ಸೇತುವೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ.

ದೂಧಗಂಗಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಕಾರದಗಾ-ಬೋಜ್ ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ. ಇತ್ತ ವೇದಗಂಗಾ ನದಿಯ ಆರ್ಭಟಕ್ಕೆ ಬಾರವಾಡ-ಕನ್ನೂರ ಹಾಗೂ ಬೋಜವಾಡಿ-ಗಜವರವಾಡಿ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆಗಳು ನೀರಿನಲ್ಲಿ ಮುಳುಗಿವೆ. ಇದರಿಂದಾಗಿ ಸುತ್ತಮುತ್ತಲಿನ ಹಳ್ಳಿಗಳ ಸಂಪರ್ಕ ಕಡಿತಗೊಂಡಿದ್ದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಇದಲ್ಲದೆ, ಮಹಾರಾಷ್ಟ್ರ ಗಡಿಯ ರಾಜಾಪುರ-ಜುಗಳ ಸೇತುವೆ ಮೇಲೆಯೂ ಪ್ರವಾಹದ ನೀರು ಹರಿಯುತ್ತಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಜಾನುವಾರುಗಳು ನದಿಗಿಳಿಯದಂತೆ ಆಡಳಿತ ಮಂಡಳಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

*ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಪಾಲ್ಗೊಂಡ ಚನ್ನರಾಜ ಹಟ್ಟಿಹೊಳಿ*

Dailyhunt
Disclaimer: This content has not been generated, created or edited by Dailyhunt. Publisher: Pragativahini