Dailyhunt Logo
  • Light mode
    Follow system
    Dark mode
    • Play Story
    • App Story
*ಕಂದಕಕ್ಕೆ ಉರುಳಿ ಬಿದ್ದ ಬಸ್: 40 ಜನರು ದುರ್ಮರಣ*

*ಕಂದಕಕ್ಕೆ ಉರುಳಿ ಬಿದ್ದ ಬಸ್: 40 ಜನರು ದುರ್ಮರಣ*

Pragativahini 3 weeks ago

ಪ್ರಗತಿವಾಹಿನಿ ಸುದ್ದಿ: ಪ್ರಯಾಣಿಕರ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 40 ಜನರು ಸಾವನ್ನಪ್ಪಿರುವ ದಾರುಣ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

ಇದು ಪಾಕಿಸ್ತಾನದಲ್ಲಿ ಇತ್ತೀಚಿನ ವರ್ಷಗಳಲ್ಲೇ ಅತ್ಯಂತ ಭೀಕರ ಅಪಘಾತ ಎನ್ನಲಾಗಿದೆ. ಇಂದು ಮುಂಜಾನೆ ಪ್ರಯಾಣಿಕರಿಂದ ಕಿಕ್ಕಿರಿದು ತುಂಬಿದ್ದ ಬಸ್ಸೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 40 ಜನರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಲೂಚಿಸ್ತಾನ್ ಮತ್ತು ಖೈಬರ್ ಪಖ್ತುಂಖ್ವಾ ಪ್ರಾಂತ್ಯಗಳ ಗಡಿ ಭಾಗದ ದೂರದ ಪ್ರದೇಶವಾದ ಡಾನಾ ಸಾರ್ ಎಂಬಲ್ಲಿ ಈ ದುರ್ಘಟನೆ ನಡೆದಿದೆ ಎಂದು ಬಲೂಚಿಸ್ತಾನ್ ಸರ್ಕಾರದ ವಕ್ತಾರ ಶಾಹಿದ್ ರಿಂಡ್ ತಿಳಿಸಿದ್ದಾರೆ.

ಅಪಘಾತಕ್ಕೀಡಾದ ಬಸ್ ತನ್ನಲ್ಲಿದ್ದ ಪ್ರಯಾಣಿಕರಷ್ಟೇ ಅಲ್ಲದೆ, ಮಾರ್ಗಮಧ್ಯೆ ಕೆಟ್ಟು ನಿಂತಿದ್ದ ಮತ್ತೊಂದು ಬಸ್ಸಿನ ಪ್ರಯಾಣಿಕರನ್ನೂ ಹತ್ತಿಸಿಕೊಂಡಿತ್ತು. ಹೀಗಾಗಿ ವಾಹನದಲ್ಲಿ ಮಿತಿಗಿಂತ ಹೆಚ್ಚು ಜನ ತುಂಬಿದ್ದರು ಎಂಣ್ದು ತಿಳಿದುಬಮ್ದಿದೆ.

*ಡೇ ಕೇರ್ ಸೆಂಟರ್ ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ: ಪ್ರಮುಖ ಆರೋಪಿ ಸೇರಿ ಇಬ್ಬರು ಅರೆಸ್ಟ್*

Dailyhunt
Disclaimer: This content has not been generated, created or edited by Dailyhunt. Publisher: Pragativahini