Dailyhunt Logo
  • Light mode
    Follow system
    Dark mode
    • Play Story
    • App Story
*ಕೇಂದ್ರ ಸಚಿವ ಜಾರ್ಜ್ ಕುರಿಯನ್ ದಿಢೀರ್ ರಾಜೀನಾಮೆ*

*ಕೇಂದ್ರ ಸಚಿವ ಜಾರ್ಜ್ ಕುರಿಯನ್ ದಿಢೀರ್ ರಾಜೀನಾಮೆ*

Pragativahini 1 day ago

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಮೀನುಗಾರಿಕೆ ಇಲಾಖೆಯ ರಾಜ್ಯ ಸಚಿವ, ಹಿರಿಯ ಬಿಜೆಪಿ ನಾಯಕ ಜಾರ್ಜ್ ಕುರಿಯನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 75ನೇ ವಿಧಿಯ ಷರತ್ತು (2) ರ ಅಡಿಯಲ್ಲಿ ಜಾರ್ಜ್ ಕುರಿಯನ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.

ಜಾರ್ಜ್ ಕುರಿಯನ್ ಅವರ 6 ವರ್ಷಗಳ ರಾಜ್ಯಸಭಾ ಸದಸ್ಯತ್ವದ ಅವಧಿ ಮುಗಿದಿರುವುದರಿಂದ ಅವರು ನಿಯಮಾನುಸಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡದ್ದಾರೆ. ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಳಪೆ ಪ್ರದರ್ಶನದಿಂದಾಗಿ ಈ ಬಾರಿ ಕುರಿಯನ್ ಅವರನ್ನು ಮತ್ತೆ ರಾಜ್ಯಸಭೆಗೆ ಮರು ನಾಮನಿರ್ದೇಶನ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Pragativahini