Dailyhunt Logo
  • Light mode
    Follow system
    Dark mode
    • Play Story
    • App Story
*ಖ್ಯಾತ ನಿರ್ದೇಶಕ ಓಂ ಪ್ರಕಾಶ್ ರಾವ್ ವಿರುದ್ಧ ವಂಚನೆ ಆರೋಪ: ದೂರು ದಾಖಲು*

*ಖ್ಯಾತ ನಿರ್ದೇಶಕ ಓಂ ಪ್ರಕಾಶ್ ರಾವ್ ವಿರುದ್ಧ ವಂಚನೆ ಆರೋಪ: ದೂರು ದಾಖಲು*

Pragativahini 1 day ago

ನ್ನಡದ ಖ್ಯಾತ ನಿರ್ದೇಶಕ ಹಾಗೂ ನಟ ಓಂ ಪ್ರಕಾಶ್ ರಾವ್ ವಿರುದ್ಧ ಕೋಟ್ಯ್ಂತರ ರೂಪಾಯಿ ವಂಚನೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂತು ದಾಖಲಾಗಿದೆ.

ಸಿನಿಮಾ ನಿರ್ಮಾಣದ ಹೆಸರಿನಲ್ಲಿ 3.85 ಕೋಟಿ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ. ಹಣ ವಾಪಸ್ ಕೇಳಿದ್ದಕ್ಕೆ ಬೆದರಿಕೆ ಹಾಕಿದದರೆ ಎಂದು ಆರೋಪಿಸಿ ಭಾಸ್ಕರ್ ಶೆಟ್ಟಿ ಎಂಬುವವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

'ಫಿನಿಕ್ಸ್' ಎಂಬ ಸಿನಿಮಾ ನಿರ್ಮಾಣ ಮಾಡುವುದಾಗಿ ಹೇಳಿ ಓಂ ಪ್ರಕಾಶ್ ರಾವ್ ಅವರು ಭಾಸ್ಕರ್ ಶೆಟ್ಟಿ ಅವರಿಂದ ಒಟ್ಟು 3 ಕೋಟಿ 85 ಲಕ್ಷ ರೂಪಾಯಿಗಳನ್ನು ಪಡೆದುಕೊಂಡಿದ್ದರು ಎನ್ನಲಾಗಿದೆ. ಸೆಪ್ಟೆಂಬರ್ 23ರಂದು ಈ ಹಣಕಾಸಿನ ವ್ಯವಹಾರ ನಡೆದಿದ್ದು, ಕೇವಲ ಆರು ತಿಂಗಳೊಳಗೆ ಸಂಪೂರ್ಣ ಹಣವನ್ನು ಹಿಂದಿರುಗಿಸುವುದಾಗಿ ಓಂ ಪ್ರಕಾಶ್ ಭರವಸೆ ನೀಡಿದ್ದರು. ಆದರೆ, ವ್ಯವಹಾರ ನಡೆದು ಮೂರು ವರ್ಷ ಕಳೆದರೂ ಹಣ ವಾಪಸ್ ನೀಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಣ ವಾಪಸ್ ಕೇಳಿದಾಗಲೆಲ್ಲಾ ನಿರ್ದೇಶಕರು ವಿವಿಧ ಕಾರಣಗಳನ್ನು ನೀಡಿ ಕಾಲಹರಣ ಮಾಡುತ್ತಿದ್ದಾರೆ. ಅಲ್ಲದೆ, ಇತ್ತೀಚೆಗೆ ಅವರು ಸಂಪರ್ಕಕ್ಕೂ ಸಿಗದೆ ತಪ್ಪಿಸಿಕೊಳ್ಳುತ್ತಿದ್ದಾರೆ. ನನಗೆ ಸೇರಿದ ಹಣವನ್ನು ಕೇಳಲು ಓಂ ಪ್ರಕಾಶ್ ಅವರ ಮನೆಗೆ ತೆರಳಿದ್ದಾಗ, ಅಲ್ಲಿ ಬೆದರಿಕೆ ಹಾಕಿದ್ದಾರೆ. ದೂರುದಾರರ ಮೇಲೆಯೇ ಗಲಾಟೆ ಮಾಡಿದ ಆರೋಪ ಹೊರಿಸಿ ಅವರನ್ನು ಭಯಭೀತರನ್ನಾಗಿಸುವ ಪ್ರಯತ್ನ ನಡೆದಿದೆ ಎಂದು ಭಾಸ್ಕರ್ ಶೆಟ್ಟಿ ಆರೋಪಿಸಿದ್ದು, ದೂರು ನಿಡಿದ್ದಾರೆ.

*ಬಟ್ಟೆ ಬಿಚ್ಚಿಸಿ ಅವಮಾನ ಮಾಡಿದ ವಾರ್ಡನ್: ಮನನೊಂದು ವಸತಿ ಶಾಲೆ ವಿದ್ಯಾರ್ಥಿ ನಾಪತ್ತೆ*

Dailyhunt
Disclaimer: This content has not been generated, created or edited by Dailyhunt. Publisher: Pragativahini