Dailyhunt Logo
  • Light mode
    Follow system
    Dark mode
    • Play Story
    • App Story
*ಮುಂದಿನ ಮುಖ್ಯಮಂತ್ರಿ ಯಾರು? ಸಿದ್ದರಾಮಯ್ಯ ಹೇಳಿದ್ದೇನು?*

*ಮುಂದಿನ ಮುಖ್ಯಮಂತ್ರಿ ಯಾರು? ಸಿದ್ದರಾಮಯ್ಯ ಹೇಳಿದ್ದೇನು?*

Pragativahini 0 months ago

ಪ್ರಗತಿವಾಹಿನಿ ಸುದ್ದಿ: ಹೈಕಮಾಂಡ್ ಸೂಚನೆ ಮೇರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರಿಂದ ಅಂಗೀಕಾರ ಮಾತ್ರ ಬಾಕಿ ಇದೆ. ಈ ನಡುವೆ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ಮತ್ತು ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತಂತೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ.

ಡಿ.ಕೆ ಶಿವಕುಮಾರ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಅವರು, ತಮಗೆ ಹೈಕಮಾಂಡ್‌ನಿಂದ ರಾಜ್ಯಸಭಾ ಸ್ಥಾನದ ಆಫರ್ ಬಂದಿದ್ದರೂ, ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ಹಾಗಾಗಿ ಅದನ್ನು ವಿನಮ್ರವಾಗಿ ನಿರಾಕರಿಸಿರೋದಾಗಿ ತಿಳಿಸಿದ್ದಾರೆ. ನಾನು ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ. ಜನ ನನ್ನನ್ನು ಐದು ವರ್ಷಕ್ಕೆ ಆಯ್ಕೆ ಮಾಡಿದ್ದಾರೆ, ಇನ್ನೆರಡು ವರ್ಷಗಳು ಬಾಕಿ ಇವೆ. ಅಲ್ಲಿಯವರೆಗೂ ಕರ್ನಾಟಕದ ಜನತೆ ಮತ್ತು ನನ್ನ ಕ್ಷೇತ್ರದ ಜನರ ಪರವಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಹೈಕಮಾಂಡ್ ಯಾವಾಗ ಹೇಳುತ್ತದೋ ಆಗ ರಾಜೀನಾಮೆ ನೀಡುತ್ತೇನೆ ಎಂದು ನಾನು ಮೊದಲಿನಿಂದಲೂ ಹೇಳುತ್ತಿದ್ದೆ. ಯಾವುದೇ ಒತ್ತಡವಿಲ್ಲದೆ, ಹೈಕಮಾಂಡ್ ಸೂಚನೆ ನೀಡಿದ ತಕ್ಷಣ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದೇನೆ ಎಂದರು.

ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಆ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಶಾಸಕಾಂಗ ಪಕ್ಷದ ನಿರ್ಧಾರ ಮತ್ತು ಹೈಕಮಾಂಡ್ ನಿರ್ಧಾರದಂತೆ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಅಂತಿಮವಾಗಲಿದೆ ಎಂದು ಹೇಳಿದರು.

Dailyhunt
Disclaimer: This content has not been generated, created or edited by Dailyhunt. Publisher: Pragativahini