Dailyhunt Logo
  • Light mode
    Follow system
    Dark mode
    • Play Story
    • App Story
*ನಾಗೇಂದ್ರ ರಾಜೀನಾಮೆ ನೀಡುವವರೆಗೂ ಅಧಿವೇಶನ ಸುಗಮವಾಗಿ ನಡೆಯಲು ಬಿಡಲ್ಲ: ಛಲವಾದಿ ನಾರಾಯಣಸ್ವಾಮಿ*

*ನಾಗೇಂದ್ರ ರಾಜೀನಾಮೆ ನೀಡುವವರೆಗೂ ಅಧಿವೇಶನ ಸುಗಮವಾಗಿ ನಡೆಯಲು ಬಿಡಲ್ಲ: ಛಲವಾದಿ ನಾರಾಯಣಸ್ವಾಮಿ*

Pragativahini 2 weeks ago

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದ ಹಗರಣದ ಆರೋಪ ಹೊತ್ತಿರುವ ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಲಾಗಿದ್ದು ಸರಿಯಲ್ಲ. ಮೊದಲು ಅವರು ರಾಜೀನಾಮೆ ನೀಡಬೇಕು ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನ ಹರಾಜಾಗಿದೆ.

ಈ ಬಗ್ಗೆ ಆಡಿಯೋ, ವಿಡಿಯೋಗಳು ವೈರಲ್ ಆಗುತ್ತಿವೆ. ಸಚಿವ ಸ್ಥಾನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ದುರ್ಬಳಕೆ ಪ್ರಕರಣದ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಲಾಗಿದೆ. ಇದು ಕಾಂಗ್ರೆಸ್ ಭ್ರಷ್ಟರ ಪರವಾಗಿದೆ ಎಂಬುದಕ್ಕೆ ಸಾಕ್ಷಿ. ಜಾಮೀನಿನನ ಮೇಲೆ ಹೊರಗಿರುವ ನಾಗೇಂದ್ರ ಅವರನ್ನು ಮತ್ತೆ ಮಂತ್ರಿ ಮಾಡಿರುವುದನ್ನು ಒಪ್ಪುವುದಿಲ್ಲ. ಅವರು ರಾಜೀನಾಮೆ ನೀಡುವವರೆಗೂ ಆ.13ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನ ಸುಗಮವಾಗಿ ನಡೆಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

*ಶಾಸಕ ಸುಬ್ಬಾರೆಡ್ಡಿ ಬೆಂಬಲಿಗರಿಂದ ಮೂರು ತಾಲೂಕುಗಳು ಬಂದ್; ಪ್ರತಿಭಟನೆಗೆ ಮೆಣಸಿನಕಾಯಿ ತಂದು ಆಕ್ರೋಶ; ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ*

Dailyhunt
Disclaimer: This content has not been generated, created or edited by Dailyhunt. Publisher: Pragativahini