Dailyhunt Logo
  • Light mode
    Follow system
    Dark mode
    • Play Story
    • App Story
*ನಾಲ್ಕು ವರ್ಷದ ಮಗನನ್ನು ನದಿಗೆ ಎಸೆದು ಹತ್ಯೆಗೈದ ತಂದೆ*

*ನಾಲ್ಕು ವರ್ಷದ ಮಗನನ್ನು ನದಿಗೆ ಎಸೆದು ಹತ್ಯೆಗೈದ ತಂದೆ*

Pragativahini 3 weeks ago

ಪ್ರಗತಿವಾಹಿನಿ ಸುದ್ದಿ: ಪತಿ-ಪತ್ನಿ ನಡುವಿನ ಜಗಳದಲ್ಲಿ ನಾಲ್ಕು ವರ್ಷದ ಮಗುವನ್ನೇಬ್ ಕೊಲೆ ಮಾಡಿರುವ ಘಟನೆ ನಡೆದಿದೆ. ವ್ಯಕ್ತಿಯೋರ್ವ ತನ್ನ ಹೆಂಡತಿ ಮೇಲಿನ ಕೋಪಕ್ಕೆ 4 ವರ್ಷದ ಮಗನನ್ನು ನದಿಗೆ ಎಸೆದು ಹತ್ಯೆ ಮಾಡಿದ್ದಾನೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಸೋಮರಾವ್ ಹೂಗಾರ್ ಎಂಬಾತ ಮಗುವನ್ನು ಹತ್ಯೆಗೈದ ಆರೋಪಿ. ಪತ್ನಿ ಕಲ್ಪನಾ ಜೊತೆ ಗಲಾಟೆ ಮಾಡಿಕೊಂಡಿದ್ದ. ಇದೇ ಕೋಪದಲ್ಲಿ ಮಗು ಗುಂಡೇಶ್‌ನನ್ನು ಎತ್ತಿಕೊಂಡು ಆಟವಾಡಿಸುತ್ತೇನೆ ಎಂದು ಕರೆದುಕೊಂಡು ಹೋಗಿ ನಾಗರಾಳ ಜಲಾಶಯಕ್ಕೆ ಎಸೆದಿದ್ದಾನೆ.

ವಿಷಯ ತಿಳಿದ ಪತ್ನಿ ಕಲ್ಪನಾ ಗಂಡನ ವಿರುದ್ಧ ದೂರು ದಾಖಲಿದ್ದಾಳೆ. ಬಳಿಕ ಪೊಲೀಸರು ಮಗುವಿನ ಮೃತದೇಹವನ್ನು ಜಲಾಶಯದಿಂದ ಹೊರತೆಗೆದಿದ್ದಾರೆ. ಈ ಕುರಿತು ಚಿಂಚೋಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

*ಹಾಡಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು*

Dailyhunt
Disclaimer: This content has not been generated, created or edited by Dailyhunt. Publisher: Pragativahini