Dailyhunt Logo
  • Light mode
    Follow system
    Dark mode
    • Play Story
    • App Story
*ನೇಪಾಳ ಪ್ರವಾಹದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ಮುಂದಾದ ಸರ್ಕಾರ*

*ನೇಪಾಳ ಪ್ರವಾಹದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ಮುಂದಾದ ಸರ್ಕಾರ*

Pragativahini 3 weeks ago

ಪ್ರಗತಿವಾಹಿನಿ ಸುದ್ದಿ: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದ ನೂರಾರು ಜನ ಸಾವನ್ನಪ್ಪಿದ್ದು, ಅನೇಕರು ನಾಪತ್ತೆ ಆಗಿದ್ದಾರೆ. ಹಾಗಾಗಿ ಅಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಹಾಗೂ ಮಾಹಿತಿ ಸಂಗ್ರಹಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಮತ್ತು ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಹಲವು ಭಾರತೀಯರು ನಾಪತ್ತೆಯಾಗಿರುವ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ರಕ್ಷಣಾ ಕಾರ್ಯಕ್ಕೆ ಸಜ್ಜಾಗಿದೆ.

ನೇಪಾಳ ಅಥವಾ ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿಸಿಲುಕಿರುವ ಕನ್ನಡಿಗರು ಹಾಗೂ ಅವರ ಕುಟುಂಬಸ್ಥರ ವಿವರಗಳನ್ನು ಕಲೆಹಾಕಲಾಗುತ್ತಿದೆ. ನೇಪಾಳ ಅಥವಾ ಟಿಬೆಟ್ ಭಾಗದಲ್ಲಿ ತಮ್ಮ ಸಂಬಂಧಿಕರು, ಸ್ನೇಹಿತರು ಅಥವಾ ಪರಿಚಿತರು ಸಿಲುಕಿಕೊಂಡಿದ್ದರೆ, ಅವರ ವಿವರಗಳನ್ನು ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ಅಥವಾ ಪ್ರಾಧಿಕಾರಕ್ಕೆ ಒದಗಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ಈ ಸಂಬಂಧ ಗೂಗಲ್‌ ಡಾಕ್ಸ್‌ನಲ್ಲಿ ವಿವರ ತುಂಬುವಂತೆ ಮಾಹಿತಿ ಕೋರಲಾಗಿದೆ

ಸದ್ಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಗಳು ಭರದಿಂದ ಸಾಗುತ್ತಿದ್ದು, ಸಿಲುಕಿರುವವರನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ ಅಗತ್ಯ ನೆರವು ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

*ನದಿ ತಿರುವು ಯೋಜನಾ ವಿರೋಧಿ ಹೋರಾಟ ತೀವ್ರಗೊಳಿಸುವದು ಅನಿವಾರ್ಯ: ಸ್ವರ್ಣವಲ್ಲೀ ಶ್ರೀ*

Dailyhunt
Disclaimer: This content has not been generated, created or edited by Dailyhunt. Publisher: Pragativahini