Dailyhunt Logo
  • Light mode
    Follow system
    Dark mode
    • Play Story
    • App Story
*ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್*

*ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್*

Pragativahini 2 weeks ago

ಪ್ರಗತಿವಾಹಿನಿ ಸುದ್ದಿ: ಸಾರಿಗೆ ನೌಕರರ ಬಹುದಿನಗಳ ಬೇಡಿಕೆ, ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಣಿದಿದ್ದು, ಸಾರಿಗೆ ನೌಕರರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಪರಿಷ್ಕೃತ ದರ ಈ ತಿಂಗಳಿನಿಂದ ಜಾರಿಗೆ ಬರಲಿದೆ. ರಾಜ್ಯ ಸರ್ಕಾರ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಮತ್ತು ಕೆಕೆಆರ್‌ಟಿಸಿ ನೌಕರರ ಮೂಲ ವೇತನವನ್ನು 12.5%ರಷ್ಟು ಹೆಚ್ಚಿಸಿದೆ.

ಜುಲೈ ತಿಂಗಳ ವೇತನದಲ್ಲಿ ಪರಿಷ್ಕೃತ ವೇತನ ಜಾರಿಗೆ ಬರುವಂತೆ ಪಾವತಿಸಲು ಸರ್ಕಾರ ಆದೇಶ ಹೊರಡಿಸಿದ್ದು, ಹೊಸ ವೇತನ ಪರಿಷ್ಕರಣೆಯು 2025ರ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬಂದಿದೆ. ಈಗಾಗಲೇ ನೌಕರರಿಗೆ ಪಾವತಿಸಬೇಕಿದ್ದ ಹಳೆಯ ವೇತನ ಹಿಂಬಾಕಿಯ ಮೊದಲ ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ.

ವೇತನ ಹೆಚ್ಚಳದಿಂದಾಗಿ ರಾಜ್ಯದ ಸುಮಾರು 1.05 ಲಕ್ಷ ಸಾರಿಗೆ ನೌಕರರಿಗೆ ಅನುಕೂಲವಾಗಲಿದೆ. ಇದರಿಂದ ಸರ್ಕಾರಕ್ಕೆ ತಿಂಗಳಿಗೆ ಹೆಚ್ಚುವರಿಯಾಗಿ 72.80 ಕೋಟಿ ರೂ. ವೆಚ್ಚವಾಗಲಿದೆ.

*ಬಂಡೆ ಕುಸಿದು7 ಜನರ ಸಾವು*

Dailyhunt
Disclaimer: This content has not been generated, created or edited by Dailyhunt. Publisher: Pragativahini