Dailyhunt Logo
  • Light mode
    Follow system
    Dark mode
    • Play Story
    • App Story
*ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ 30 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*

*ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ 30 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*

Pragativahini 1 month ago

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಸೇರಿದಂತೆ 30 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.

ವಾಲ್ಮೀಕಿ ನಿಗಮ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (KGTTI) ಈ ಮೂರೂ ಘಟಕಗಳಲ್ಲಿ ನಡೆದಿರುವ ಆರ್ಥಿಕ ದುರುಪಯೋಗದ ತನಿಖೆ ಪೂರ್ಣಗೊಳಿಸಲಾಗಿದ್ದು, ಮೂರರಲ್ಲೂ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಂ.ಜಿ. ರೋಡ್ ಶಾಖೆಯ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ದೂರಿನ ಆಧಾರದ ಮೇಲೆ ಹೈಕೋರ್ಟ್ ಉಸ್ತುವಾರಿಯಲ್ಲಿ ಈ ತನಿಖೆ ನಡೆದಿತ್ತು. ನಂತರ ಹೈಕೋರ್ಟ್ ಆದೇಶದ ಮೇರೆಗೆ ತನಿಖೆಯನ್ನು ಇಲಾಖೆಯ ಇತರೆ ಎರಡು ಘಟಕಗಳಿಗೂ ವಿಸ್ತರಿಸಲಾಗಿತ್ತು.

ಮಾಜಿ ಸಚಿವ ನಾಗೇಂದ್ರ, ಅವರ ಆಪ್ತ ನೆಕ್ಕಂಟಿ ನಾಗರಾಜ್ ಹಾಗೂ ನಿಗಮದ ಎಂಡಿ ಪದ್ಮನಾಭ ಜಂಟಿಯಾಗಿ ಸಂಚು ರೂಪಿಸಿ ಅಕ್ರಮ ಎಸಗಿದ್ದಾರೆ. ಹೈದರಾಬಾದ್‌ನ ಸತ್ಯನಾರಾಯಣ ವರ್ಮಾ ಎಂಬಾತ ಈ ಹಿಂದೆ ಛತ್ತೀಸ್‌ಗಢದಲ್ಲಿ ಮಾಡಿದ ಮಾದರಿಯಲ್ಲೇ ಇಲ್ಲೂ ನಕಲಿ ದಾಖಲೆಗಳನ್ನು ಬಳಸಿ 18 ಬೋಗಸ್ ಬ್ಯಾಂಕ್ ಖಾತೆಗಳನ್ನು ತೆರೆದಿದ್ದ. ನಿಗಮದ ಎಂಡಿ ಮತ್ತು ಅಕೌಂಟ್ಸ್ ಆಫೀಸರ್ ಅವರ ನಕಲಿ ರಬ್ಬರ್ ಸ್ಟಾಂಪ್ ಹಾಗೂ ಸಹಿಗಳನ್ನು ಬಳಸಿ, ನಿಗಮದ ಖಾತೆಯಲ್ಲಿದ್ದ 187 ಕೋಟಿ ರೂ. ಪೈಕಿ 89.63 ಕೋಟಿ ರೂ. ಹಣವನ್ನು ಬೇರೆ ಖಾತೆಗಳಿಗೆ ವರ್ಗಾಯಿಸಲಾಗಿತ್ತು. ಈ ಹಣವನ್ನು ಸುಮಾರು 600 ಬ್ಯಾಂಕ್ ಖಾತೆಗಳ ಮೂಲಕ ರವಾನಿಸಿ ಕೊನೆಗೆ ನಗದು, ಚಿನ್ನ ಮತ್ತು ಐಷಾರಾಮಿ ಬೆನಾಮಿ ವಾಹನಗಳಾಗಿ ಪರಿವರ್ತಿಸಿಕೊಳ್ಳಲಾಗಿತ್ತು. ಇದಕ್ಕೆ ಬ್ಯಾಂಕ್ ಅಧಿಕಾರಿಗಳೂ ಸಾಥ್ ನೀಡಿದ್ದರು ಎಂದು ಸಿಬಿಐ ಹೇಳಿದೆ.

*ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ*

Dailyhunt
Disclaimer: This content has not been generated, created or edited by Dailyhunt. Publisher: Pragativahini