Dailyhunt Logo
  • Light mode
    Follow system
    Dark mode
    • Play Story
    • App Story
CISF: ಸಹಾಯಕ ಕಮಾಂಡರ್‌ ಹುದ್ದೆಗಳಿಗೆ ಅರ್ಜಿ

CISF: ಸಹಾಯಕ ಕಮಾಂಡರ್‌ ಹುದ್ದೆಗಳಿಗೆ ಅರ್ಜಿ

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಸಹಾಯಕ ಕಮಾಂಡರ್‌ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 29 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಹುದ್ದೆಗಳು ಹೆಚ್ಚಾಗುವ ಸಂಭವ ಹೆಚ್ಚಿದೆ.

ಹುದ್ದೆಗಳ ಸಂಖ್ಯೆ: 29 ಹುದ್ದೆಗಳು

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: ಹುದ್ದೆಗಳಿಗೆ ಅನುಸಾರ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಪ್ರಕಟಿಸಿರುವ ವಯೋಮಿತಿಯ ಅರ್ಹತೆ ಪಡೆದಿರಬೇಕು. ಇದರ ಮಾಹಿತಿಗೆ ವೆಬ್‌ಸೈಟ್‌ ನೋಡುವುದು.

ನೇಮಕಾತಿ ವಿಧಾನ: ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಹಾಗೂ ದೈಹಿಕ ಕ್ಷಮತೆ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಕಂಪ್ಯೂಟರ್‌ ಆಧಾರಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಗೆ ಕರೆಯಲಾಗುವುದು.

ಅಭ್ಯರ್ಥಿಗಳು ಅರ್ಜಿಯನ್ನು ಕೇಂದ್ರ ಲೋಕಸೇವಾ ಆಯೋಗದ ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ನಂತರ ಅರ್ಜಿಯನ್ನು ಡೌನ್‌ಲೋಡ್‌ ಮಾಡಿಕೊಂಡು ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ ಅಂಚೆ ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ನೋಡುವುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21-12-2021

ವೆಬ್‌ಸೈಟ್: https://upsc.gov.in

Dailyhunt
Disclaimer: This content has not been generated, created or edited by Dailyhunt. Publisher: Prajavani