ಬೆಂಗಳೂರು: 180 ನಕ್ಷತ್ರ ಆಮೆಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ.
ಹಸಿರು ಬಣ್ಣದ ಟ್ರಾಲಿ ಬ್ಯಾಗ್‌ನಲ್ಲಿ ಆಮೆಗಳನ್ನು ಆರೋಪಿ ಸಾಗಿಸುತ್ತಿದ್ದ. ಖಚಿತ ಮಾಹಿತಿ ಆಧರಿಸಿ, ಗಾಂಧಿ ನಗರದಲ್ಲಿ ಕಾರ್ಯಾಚರಣೆ ನಡೆಸಿದಾಗ ಬ್ಯಾಗ್‌ನಲ್ಲಿ ಜೀವಂತ ಆಮೆ ಇರುವುದು ಪತ್ತೆ ಆಗಿತ್ತು ಎಂದು ಮೂಲಗಳು ಹೇಳಿವೆ.
ಆರು ಬಟ್ಟೆಯ ಕವರ್‌ಗಳಲ್ಲಿ ಒಟ್ಟು 180 ಜೀವಂತ ನಕ್ಷತ್ರ ಆಮೆಗಳು ಪತ್ತೆಯಾಗಿವೆ. ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.
'ಕಲಾಸಿಪಾಳ್ಯದಲ್ಲಿ ಅಪರಿಚಿತ ವ್ಯಕ್ತಿಯಿಂದ ಟ್ರಾಲಿ ಬ್ಯಾಗ್ ಪಡೆದು, ಮೆಜೆಸ್ಟಿಕ್‌ನಲ್ಲಿದ್ದ ಮತ್ತೊಬ್ಬ ವ್ಯಕ್ತಿಗೆ ತಲುಪಿಸಲು ತೆರಳುತ್ತಿದ್ದೆ. ಮೆಜೆಸ್ಟಿಕ್‌ನಲ್ಲಿ ಇರುವ ವ್ಯಕ್ತಿಗೆ ಬ್ಯಾಗ್ ತಲುಪಿಸಿದರೆ ₹10 ಸಾವಿರ ನೀಡುವುದಾಗಿ ಅಪರಿಚಿತ ವ್ಯಕ್ತಿ ಹೇಳಿದ್ದ. ಹಣದಾಸೆಗೆ ಈ ಕೆಲಸ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಪ್ರಕರಣದ ತನಿಖೆ ಮುಂದುವರಿದಿದೆ' ಎಂದಿದ್ದಾರೆ ಡಿಆರ್‌ಐ ಅಧಿಕಾರಿಗಳು.
260909-18-1681021577

