ನವದೆಹಲಿ, ಸೆ. 18- ಸಂವಿಧಾನಕ್ಕೆ ತಿದ್ದುಪಡಿ ಮಾಡಿ ಆರರಿಂದ ಹದಿನಾಲ್ಕು ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ನೀಡುವುದನ್ನು ಮೂಲಭೂತ ಹಕ್ಕನ್ನಾಗಿ ಮಾಡಲು ಕೇಂದ್ರ ಸಚಿವ ಸಂಪುಟ ಇಂದು ನಿರ್ಧರಿಸಿದೆ.
ಆರು ವರ್ಷದಿಂದ 14 ವರ್ಷದವರೆಗಿನ ಮಕ್ಕಳಿಗೆ ಶಿಕ್ಷಣ ನೀಡುವುದನ್ನು ತಂದೆ-ತಾಯಿಯ ಪ್ರಾಥಮಿಕ ಕರ್ತವ್ಯವನ್ನಾಗಿ ಮಾಡುವುದು ಸಂವಿಧಾನ ತಿದ್ದುಪಡಿಯ ಮುಖ್ಯ ಉದ್ದೇಶ.

