ಬಾಳೆಹೊನ್ನೂರು: 2027-28ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಯಲಿರುವ ಜವಾಹರ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ ಪ್ರವೇಶ ಪತ್ರಗಳನ್ನು ನವೋದಯ ವಿದ್ಯಾಲಯ ಸಮಿತಿಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಪರೀಕ್ಷೆಯ ನ. 28ರಂದು ನಡೆಯಲಿದ್ದು, ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ನವೋದಯ ವಿದ್ಯಾಲಯ ಸಮಿತಿಯ ಅಧಿಕೃತ ವೆಬ್‌ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು.
ಪ್ರವೇಶ ಪತ್ರದಲ್ಲಿರುವ ತಮ್ಮ ಹೆಸರು, ನೋಂದಣಿ ಸಂಖ್ಯೆ, ಪರೀಕ್ಷಾ ಕೇಂದ್ರ ಹಾಗೂ ಇತರ ವಿವರಗಳನ್ನು ಸರಿಯಾಗಿ ಪರಿಶೀಲಿಸಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವಾಗ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತರಬೇಕು ಎಂದು ಪ್ರಕಟಣೆ ತಿಳಿಸಿದೆ.
261104-126-100649492

