Dailyhunt Logo
  • Light mode
    Follow system
    Dark mode
    • Play Story
    • App Story
ಆತ್ಮಹತ್ಯೆಗೆ ಶರಣಾದ ಕಿರುತೆರೆ ನಟಿ ಸಂಚಿತಾ ಉಗಲೆ ಯಾರು?: ಇಲ್ಲಿದೆ ಮಾಹಿತಿ..

ಆತ್ಮಹತ್ಯೆಗೆ ಶರಣಾದ ಕಿರುತೆರೆ ನಟಿ ಸಂಚಿತಾ ಉಗಲೆ ಯಾರು?: ಇಲ್ಲಿದೆ ಮಾಹಿತಿ..

ಮುಂಬೈ: ಹಿಂದಿಯ 'ಕುಂಕುಮ ಭಾಗ್ಯ' ಧಾರಾವಾಹಿಯ ಮೂಲಕ ಗುರುತಿಸಿಕೊಂಡಿದ್ದ ನಟಿ ಸಂಚಿತಾ ಉಗಲೆ (22) ಅವರು ಜೂನ್ 14ರಂದು ಮುಂಬೈನ ನಲಸೋಪಾರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರುತೆರೆ, ಒಟಿಟಿ ವೇದಿಕೆ ಹಾಗೂ ಸಿನಿಮಾಗಳಲ್ಲಿ ನಟಿಸಿ ಪ್ರಸಿದ್ದಿ ಪಡೆದಿದ್ದರು.

ಇವರ ಸಾವಿಗೆ ನಟ, ನಟಿಯರು ಹಾಗೂ ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ಸಂತಾಪ ಸೂಚಿಸಿದ್ದಾರೆ.

ಕಿರುತೆರೆಯ ಮೂಲಕ ನಟನೆಯ ಆರಂಭಿಸಿದ್ದ ಅವರು, 'ವಾಗ್ಲೆ ಕಿ ದುನಿಯಾ', 'ನಯಿ ಪೀಢಿ ನಯೇ ಕಿಸ್ಸೇ', 'ದಿಲ್ವಾಲಿ ದುಲ್ಹಾ ಲೇ ಜಾಯೇಗಿ' ಧಾರಾವಾಹಿಗಳಲ್ಲಿ ನಟಿಸಿದ್ದರು. ಇದಲ್ಲದೆ, ಅವರು 'ಕ್ರೈಮ್ ಆಜ್ ಕಲ್', 'ವಿಕ್ರಾಂತ್ ಮಾಸ್ಸಿ', 'ಸೈಲೆನ್ಸ್2', 'ದಿ ನೈಟ್ ಒಲ್ ಬಾರ್ ಶೂಟ್‌ಒಔಟ್' ವೆಬ್ ಸರಣಿಯಲ್ಲಿ ಅಭಿನಯಿಸಿದ್ದರು.

ಸಂಚಿತಾ, ಇತ್ತಿಚೇಗೆ ಬಾಲಿವುಡ್‌ಗೂ ಪದಾರ್ಪಣೆ ಮಾಡಿ ವಿಕ್ಕಿ ಕೌಶಲ್ ನಟನೆಯ 'ಛಾವಾ' ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ಸಕ್ರೀಯವಾಗಿದ್ದ ಅವರು, ಫಿಟ್‌ನೆಸ್, ಯೋಗಗಳ ಬಗ್ಗೆ, ಸುತ್ತಾಟ ಕುರಿತ ವಿಡಿಯೊಗಳನ್ನು ಹಂಚಿಕೊಳ್ಳುತ್ತಿದ್ದರು.

ಘಟನೆಯ ವಿವರ

ಸಂಚಿತಾ, ಮುಂಬೈನ ನಲಸೋಪಾರದಲರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಾನುವಾರ ಸಂಜೆ ಸುಮಾರು 7 ಗಂಟೆ ಹೊತ್ತಿಗೆ ಸಂಚಿತಾ ಅವರು ತಮ್ಮ ಮಲಗುವ ಕೋಣೆಯನ್ನು ಒಳಗಿನಿಂದ ಲಾಕ್ ಮಾಡಿಕೊಂಡಿದ್ದರು. ನಂತರ ಸೀರೆಯಿಂದ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾರೆ. ಕೂಡಲೇ ಕುಟುಂಬ ಸದಸ್ಯರು ಮತ್ತು ಸ್ಥಳೀಯ ನಿವಾಸಿಗಳು ಅವರನ್ನು ವಸಾಯಿ-ವಿರಾರ್ ಮುನ್ಸಿಪಲ್ ಆಸ್ಪತ್ರೆಗೆ ಕರೆದೊಯ್ದರಾದರೂ, ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದರು ಎಂದು ಪೊಲೀಸ್ ಇನ್ಸ್‌ಪೆಕ್ಟರ್ ವಿನೋದ್ ಮಾಹಿತಿ ನೀಡಿದ್ದಾರೆ.

ಈ ಘಟನೆ ಸಂಬಂಧ ಮಚ್ಚಿಂದ್ರ ಉಗಾಲೆ ಅವರ ದೂರಿನ ಆಧಾರದ ಮೇಲೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 194ರ ಅಡಿಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ ಎಂದು ಪೋಲಿಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani