Dailyhunt Logo
  • Light mode
    Follow system
    Dark mode
    • Play Story
    • App Story
ಐಟಿಐ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನ ಆಚರಣೆ

ಐಟಿಐ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನ ಆಚರಣೆ

ಚಿಕ್ಕಬಳ್ಳಾಪುರ: ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 'ಮೈ ಭಾರತ್' ಸಂಘಟನೆ ಆಶ್ರಯದಲ್ಲಿ ಈಚೆಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಅಂಗವಾಗಿ ರಾಷ್ಟ್ರೀಯ ಏಕತಾ ದಿನಾಚರಣೆ ‌ಆಚರಿಸಲಾಯಿತು.

ಜಿಲ್ಲಾ ಯುವ ಅಧಿಕಾರಿ ಎ.ಮಹೇಂದ್ರ ರೆಡ್ಡಿ ಮಾತನಾಡಿ, ಪ್ರತಿಯೊಬ್ಬರೂ ದೇಶಭಕ್ತಿ ಬೆಳೆಸಿಕೊಳ್ಳಬೇಕು.

ದೇಶದ ಏಕತೆ ಮತ್ತು ಸಮಗ್ರತೆ ಕಾಪಾಡುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಸಲ್ಲಿಸಿದ ಸೇವೆ ಹಾಗೂ ಅವರ ಆದರ್ಶಗಳು ಪ್ರತಿಯೊಬ್ಬರಿಗೂ ಮಾದರಿ ಎಂದರು.

ವಿವಿಧ ಸಂಸ್ಥಾನಗಳನ್ನು ಒಂದುಗೂಡಿಸಿ ಅಖಂಡ ಭಾರತದ ನಿರ್ಮಾಣಕ್ಕೆ ಮಹತ್ವದ ಕೊಡುಗೆನೀಡಿದ ಪಟೇಲ್ ಅವರ ಸಾಧನೆ ಸ್ಮರಣೀಯ. ಭಾರತದ ಏಕತೆಯ ಸಂದೇಶವನ್ನು ಜಗತ್ತಿಗೆ ಸಾರುವ ಜವಾಬ್ದಾರಿ ಯುವಜನರ ಮೇಲಿದೆ. ಜಾತಿ, ಧರ್ಮ ಹಾಗೂ ಭಾಷೆಯ ಭೇದಭಾವ ಮರೆತು ಎಲ್ಲರೂ ಒಂದಾಗಿ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಮುನಿಸ್ವಾಮಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ದೇಶಭಕ್ತಿ, ಶಿಸ್ತು, ದೈಹಿಕ ಸದೃಢತೆ ಹಾಗೂ ಆರೋಗ್ಯಕ್ಕೂ ಆದ್ಯತೆ ನೀಡಬೇಕು. ಸಮಾಜದಲ್ಲಿ ಶಾಂತಿ, ಸೌಹಾರ್ದ ಮತ್ತು ರಾಷ್ಟ್ರೀಯ ಏಕತೆ ಕಾಪಾಡಲು ಯುವಜನರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಏಕತೆ ಮತ್ತು ದೇಶದ ಸಮಗ್ರತೆಯನ್ನು ಕಾಪಾಡುವ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು.

261104-16-1861808306

Dailyhunt
Disclaimer: This content has not been generated, created or edited by Dailyhunt. Publisher: Prajavani