Dailyhunt Logo
  • Light mode
    Follow system
    Dark mode
    • Play Story
    • App Story
ಅಕ್ರಮ ಕಲ್ಲಿದ್ದಲು ವ್ಯಾಪಾರ: 4 ರಾಜ್ಯಗಳ 45 ಸ್ಥಳಗಳಲ್ಲಿ ಸಿಬಿಐ ದಾಳಿ

ಅಕ್ರಮ ಕಲ್ಲಿದ್ದಲು ವ್ಯಾಪಾರ: 4 ರಾಜ್ಯಗಳ 45 ಸ್ಥಳಗಳಲ್ಲಿ ಸಿಬಿಐ ದಾಳಿ

ನವದೆಹಲಿ: ಅಕ್ರಮ ಕಲ್ಲಿದ್ದಲು ವ್ಯಾಪಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಶನಿವಾರ ನಾಲ್ಕು ರಾಜ್ಯಗಳ 45 ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್‌, ಉತ್ತರ ಪ್ರದೇಶ ರಾಜ್ಯಗಳ ವಿವಿಧ ಪ್ರದೇಶಗಳಲ್ಲಿ ಈ ಶೋಧ ನಡೆದಿದೆ ಎಂದು ಸಿಬಿಐ ಅದಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಕ್ರಮ ಗಣಿಗಾರಿಕೆ ಮತ್ತು ಕಲ್ಲಿದ್ದಲು ಕಳ್ಳತನಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ಅನುಪ್‌ ಮಾಂಜಿ ಮತ್ತು ಇಸಿಎಲ್‌, ರೈಲ್ವೆ ಮತ್ತು ಸಿಐಎಸ್‌ಎಫ್‌ ಅಧಿಕಾರಿಗಳು ಸೇರಿದಂತೆ ಕೆಲವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿತ್ತು.

Dailyhunt
Disclaimer: This content has not been generated, created or edited by Dailyhunt. Publisher: Prajavani