Dailyhunt Logo
  • Light mode
    Follow system
    Dark mode
    • Play Story
    • App Story
ಅಮೆರಿಕ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ

ಅಮೆರಿಕ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ

ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಸೋಮವಾರ ನಡೆದ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 82 ಪೈಸೆಯಷ್ಟು ಕುಸಿದಿದ್ದು, ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಇಳಿದಿದೆ.

ವಹಿವಾಟಿನ ಅಂತ್ಯದ ವೇಳೆಗೆ ರೂಪಾಯಿ ಮೌಲ್ಯವು ₹95.31ಕ್ಕೆ ಇಳಿದಿದೆ.

ಪಶ್ಚಿಮ ಏಷ್ಯಾ ಶಾಂತಿ ಪ್ರಸ್ತಾವನೆಗೆ ಇರಾನ್ ನೀಡಿದ ಪ್ರತಿಕ್ರಿಯೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿರಸ್ಕರಿಸಿದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಗಗನಕ್ಕೇರಿದೆ.

ದೇಶದ ಷೇರುಪೇಟೆಯಿಂದ ವಿದೇಶಿ ಬಂಡವಾಳದ ಹೊರಹರಿವು, ಪಶ್ಚಿಮ ಏಷ್ಯಾ ಸಂಘರ್ಷದ ಅನಿಶ್ಚಿತತೆಯು ಹೂಡಿಕೆದಾರರ ಭಾವನೆ ಮೇಲೆ ಪರಿಣಾಮ ಬೀರಿದೆ. ಇವು ರೂಪಾಯಿ ಮೌಲ್ಯ ಇಳಿಕೆಗೆ ಕಾರಣವಾಗಿವೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ನಾಗರಿಕರು ಚಿನ್ನ ಖರೀದಿಸುವುದನ್ನು ನಿಲ್ಲಿಸಬೇಕು ಮತ್ತು ಮಿತವ್ಯಯ ಕ್ರಮಗಳನ್ನು ಅನುಸರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವುದು ಷೇರು ಮಾರುಕಟ್ಟೆ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 1,312 ಅಂಶ ಇಳಿಕೆಯಾಗಿ, 76,015ಕ್ಕೆ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 360 ಅಂಶ ಕಡಿಮೆಯಾಗಿ, 23,815ಕ್ಕೆ ಕೊನೆಗೊಂಡಿದೆ. ಬ್ರೆಂಟ್‌ ಕಚ್ಚಾ ತೈಲ ದರ ಶೇಕಡ 2.52ರಷ್ಟು ಏರಿಕೆಯಾಗಿ ಪ್ರತಿ ಬ್ಯಾರೆಲ್‌ಗೆ 103.8 ಡಾಲರ್‌ಗೆ ತಲುಪಿದೆ.

Dailyhunt
Disclaimer: This content has not been generated, created or edited by Dailyhunt. Publisher: Prajavani