ನವದೆಹಲಿ: ಬಿಜೆಪಿ ರಾಜ್ಯಸಭಾ ಸಂಸದ ದಿನೇಶ್ ಶರ್ಮಾ ಅವರನ್ನು ಅಂಡಮಾನ್- ನಿಕೋಬಾರ್ ದ್ವೀಪದ ನೂತನ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಆಗಿ ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ಶನಿವಾರ ತಿಳಿಸಿದೆ.
2017ರ ಅಕ್ಟೋಬರ್ 8ರಿಂದ ಅಂಡಮಾನ್-ನಿಕೋಬಾರ್ ದ್ವೀಪದ ಲೆಫ್ಟಿನೆಂಟ್ ಗವರ್ನರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ನಿವೃತ್ತ ಅಡ್ಮಿರಲ್ ಡಿ.ಕೆ.ಜೋಶಿ ಅವರ ಉತ್ತರಾಧಿಕಾರಿಯಾಗಿ ದಿನೇಶ್ ಶರ್ಮಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ದಿನೇಶ್ ಶರ್ಮಾ ಅವರು ತಮ್ಮ ಅಧಿಕಾರ ವಹಿಸಿಕೊಂಡ ದಿನದಿಂದ ಜಾರಿಗೆ ಬರುವಂತೆ ಅಂಡಮಾನ್-ನಿಕೋಬಾರ್ ದ್ವೀಪದ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲು ಭಾರತದ ರಾಷ್ಟ್ರಪತಿ ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ಶನಿವಾರ ತಡರಾತ್ರಿ ರಾಷ್ಟ್ರಪತಿ ಭವನ ಹೊರಡಿಸಿದ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
62 ವರ್ಷದ ದಿನೇಶ್ ಶರ್ಮಾ ಅವರು ಹಿಂದೆ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು. ಅವರ ರಾಜ್ಯಸಭಾ ಸದಸ್ಯತ್ವದ ಅವಧಿಯು ನವೆಂಬರ್ 25ಕ್ಕೆ ಕೊನೆಗೊಳ್ಳಲಿತ್ತು. ಪ್ರಸ್ತುತ ಅವರು ರಾಜ್ಯಸಭೆಯ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ಜೆಎಂಎಂ ಹಿರಿಯ ನಾಯಕ, ಸಚಿವ ಸುದಿವ್ಯ ಕುಮಾರ್ ಸೋನು ನಿಧನಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ: 8 ಜನ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ
