Dailyhunt Logo
  • Light mode
    Follow system
    Dark mode
    • Play Story
    • App Story
ಅಂಜನಾದ್ರಿಗೆ ರಾಹುಲ್ ದ್ರಾವಿಡ್ ದಂಪತಿ ಭೇಟಿ, ದೇವರ ದರ್ಶನ

ಅಂಜನಾದ್ರಿಗೆ ರಾಹುಲ್ ದ್ರಾವಿಡ್ ದಂಪತಿ ಭೇಟಿ, ದೇವರ ದರ್ಶನ

ಗಂಗಾವತಿ: ತಾಲ್ಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಶುಕ್ರವಾರ ಕ್ರಿಕೆಟ್ ಆಟಗಾರ ರಾಹುಲ್ ದ್ರಾವಿಡ್ ಅವರು ಶುಕ್ರವಾರ ಅಂಜನಾದ್ರಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬೆಳಿಗ್ಗೆ ಪತ್ನಿ ವಿಜೇತಾ ಪೆಂಡಾರ್ಕರ್ ಜೊತೆಗೆ ಅಂಜನಾದ್ರಿ ಬೆಟ್ಟದ 575 ಮೆಟ್ಟಿಲು ಏರಿ, ಹನುಮಂತನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಮಯದಲ್ಲಿ ಅರ್ಚಕರು ದಂಪತಿಗೆ ಕೇಸರಿ ಶಾಲು ಹೊದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬೆಟ್ಟದ ಸಿಬ್ಬಂದಿ, ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರು ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರ ಜೊತೆ ಪೋಟೊ ಕ್ಲಿಕ್ಕಿಸಿಕೊಂಡರು. ದ್ರಾವಿಡ್ ಎರಡು ದಿನಗಳ ಹಿಂದೆ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-35-127458205

Dailyhunt
Disclaimer: This content has not been generated, created or edited by Dailyhunt. Publisher: Prajavani