Dailyhunt Logo
  • Light mode
    Follow system
    Dark mode
    • Play Story
    • App Story
ಅಪಾಯಕಾರಿ ಚರಂಡಿಗೆ ಶಾಶ್ವತ ಬ್ಯಾರಿಕೇಡ್ ನಿರ್ಮಾಣ

ಅಪಾಯಕಾರಿ ಚರಂಡಿಗೆ ಶಾಶ್ವತ ಬ್ಯಾರಿಕೇಡ್ ನಿರ್ಮಾಣ

ದಾವಣಗೆರೆ: ನಗರದ ಲಕ್ಷ್ಮಿ ಫ್ಲೋರ್‌ ಮಿಲ್‌ ವೃತ್ತದಲ್ಲಿ ಬಾಯ್ದೆರೆದಿದ್ದ ಚರಂಡಿಗೆ ಮಹಾನಗರ ಪಾಲಿಕೆ ವತಿಯಿಂದ ಕಬ್ಬಿಣದ ಬ್ಯಾರಿಕೇಡ್ ನಿರ್ಮಿಸಲಾಗಿದೆ.

ವೃತ್ತದ ಮೂಲಕ ತಿರುವು ಪಡೆಯುವಾಗ ವಾಹನ ಸವಾರರು ಆಯ ತಪ್ಪಿ ಚರಂಡಿಗೆ ಬೀಳುವ ಸಾಧ್ಯತೆ ಅಧಿಕವಾಗಿತ್ತು. ಈ ಬಗ್ಗೆ ಮಾ.29ರಂದು 'ಪ್ರಜಾವಾಣಿ'ಯಲ್ಲಿ ವರದಿ ಪ್ರಕಟವಾಗಿತ್ತು.

ಸಂಭಾವ್ಯ ಅಪಾಯವನ್ನು ತಡೆಯುವ ಉದ್ದೇಶದಿಂದ ಶಾಶ್ವತ ಬ್ಯಾರಿಕೇಡ್ ನಿರ್ಮಿಸಲಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದು, ಪಾಲಿಕೆ ಆಯುಕ್ತರಿಗೆ ಧನ್ಯವಾದ ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260705-43-5526673

Dailyhunt
Disclaimer: This content has not been generated, created or edited by Dailyhunt. Publisher: Prajavani