Dailyhunt Logo
  • Light mode
    Follow system
    Dark mode
    • Play Story
    • App Story
ಅಪ್ಪ ಕಲಿಸಿದ ಪಾಠ ನೆನಪಿಸಿಕೊಂಡು ನೀಟ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿನ್

ಅಪ್ಪ ಕಲಿಸಿದ ಪಾಠ ನೆನಪಿಸಿಕೊಂಡು ನೀಟ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿನ್

ಸಂಕ್ಷಿಪ್ತ ಮಾಹಿತಿ - ಪೂರ್ಣ ವಿವರಣೆಗೆ ಕ್ಲಿಕ್ ಮಾಡಿಪ್ರಮುಖ ಮುಖ್ಯಾಂಶಗಳ ಸಂಕ್ಷಿಪ್ತ ಸಾರಾಂಶ

ಅಪ್ಪ ಕಲಿಸಿದ ಪಾಠ ನೆನಪಿಸಿಕೊಂಡು ನೀಟ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿನ್

ಒಂದು ಸಾಲಿನಲ್ಲಿನೀಟ್ ಪರೀಕ್ಷಾ ಅಕ್ರಮಗಳ ಕುರಿತು ಪ್ರತಿಕ್ರಿಯಿಸಿರುವ ಸಚಿನ್ ತೆಂಡೂಲ್ಕರ್, ಯುವಕರಿಗೆ ಮೋಸ ರಹಿತ ಮತ್ತು ಪ್ರಾಮಾಣಿಕ ಮೌಲ್ಯಗಳನ್ನು ಕಲಿಸುವ ಸಮಾಜದ ಅವಶ್ಯಕತೆಯನ್ನು ಒತ್ತಿ ಹೇಳಿದ್ದಾರೆ.

ಏನು? ಏಕೆ? ಹೇಗೆ?


ನೀಟ್ ಪರೀಕ್ಷಾ ವಿವಾದದ ಬಗ್ಗೆ ಸಚಿನ್ ಅವರ ಪ್ರತಿಕ್ರಿಯೆ ಹೇಗಿದೆ?

ಸಚಿನ್ ಅವರು ತಮ್ಮ ತಂದೆಯ ಪಾಠವನ್ನು ಉಲ್ಲೇಖಿಸಿ, ಯುವಕರು ಅಡ್ಡದಾರಿ ಹಿಡಿಯದಂತೆ ಮತ್ತು ಕಠಿಣ ಪರಿಶ್ರಮಕ್ಕೆ ಮೌಲ್ಯ ನೀಡುವ ಸಂಸ್ಕೃತಿಯನ್ನು ಬೆಳೆಸುವ ಅಗತ್ಯವಿದೆ ಎಂದು ಕರೆ ನೀಡಿದ್ದಾರೆ.


ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಆಗಿದ್ದೇನು?

ಮೇ 3ರಂದು ನಡೆದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಭಾರಿ ವಿವಾದ ಉಂಟಾಗಿ, ಜೂನ್ 21ರಂದು ಮರುಪರೀಕ್ಷೆಯನ್ನು ನಡೆಸಲಾಯಿತು.


ಪ್ರಸ್ತುತ ವಿದ್ಯಾರ್ಥಿಗಳಲ್ಲಿನ ಅಸಮಾಧಾನಕ್ಕೆ ಕಾರಣಗಳೇನು?

ಮರುಪರೀಕ್ಷೆಯ ಕೀ ಉತ್ತರಗಳು ಮತ್ತು ಫಲಿತಾಂಶದ ಅಂಕಗಳಲ್ಲಿ ವ್ಯತ್ಯಾಸವಿದೆ ಎಂಬ ದೂರುಗಳು ಕೇಳಿಬಂದಿದ್ದು, ವಿದ್ಯಾರ್ಥಿಗಳು ಫಲಿತಾಂಶದ ನಿಖರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.


ಪ್ರತಿಭಟನಾಕಾರರು ಮುಖ್ಯವಾಗಿ ಯಾವ ಬೇಡಿಕೆಗಳನ್ನು ಇಟ್ಟಿದ್ದಾರೆ?

ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣವಾದ ನೀಟ್ ಅಕ್ರಮಗಳ ಹೊಣೆ ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.


ಈ ಹೋರಾಟಕ್ಕೆ ಯಾರೆಲ್ಲಾ ಬೆಂಬಲ ಸೂಚಿಸಿದ್ದಾರೆ?

ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪರಿಸರವಾದಿ ಸೊನಮ್ ವಾಂಗ್‌ಚೂಕ್ ಅವರು ಜೂನ್ 28ರಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಪ್ರಮುಖ ಅಂಕಿಅಂಶಗಳು

ಮೇ 3ನೀಟ್ ಪರೀಕ್ಷೆಜೂನ್ 21ನೀಟ್ ಮರುಪರೀಕ್ಷೆಜೂನ್ 20ಸಿಜೆಪಿ ಪ್ರತಿಭಟನೆ ಆರಂಭಜೂನ್ 28ಸೊನಮ್ ವಾಂಗ್‌ಚೂಕ್ ಉಪವಾಸ ಆರಂಭ

ಎಐ ಬಳಸಿ ಸಂಸ್ಕರಿಸಲಾಗಿದೆ. ಪಿವಿ ಡಿಜಿಟಲ್ ತಂಡ ಪರಿಶೀಲಿಸಿದೆ

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಕಾಕ್ರೋಚ್‌ ಜನತಾ ಪಕ್ಷದ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಭಾರತ ರತ್ನ, ಕ್ರಿಕೆಟ್‌ ದಂತಕತೆ ಸಚಿನ್‌ ತೆಂಡೂಲ್ಕರ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, 'ನನ್ನ ತಂದೆಯೂ ಪ್ರಾಧ್ಯಾಪಕರಾಗಿದ್ದರು. ಅನೇಕ ಯುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. 'ಸೋತರೂ ಸರಿ, ಮೋಸ ಮಾಡಬಾರದು. ಯಾವುದೇ ಕಾರಣಕ್ಕೂ ಅಡ್ಡದಾರಿ ಹಿಡಿಯಬಾರದು' ಎಂಬುದನ್ನು ಅವರು ನನಗೆ ಬಾಲ್ಯದಲ್ಲೇ ಕಲಿಸಿದ್ದರು' ಎಂದು ಬರೆದುಕೊಂಡಿದ್ದಾರೆ.

'ಸಮಾಜದಲ್ಲಿರುವ ಯುವಕರಿಗಾಗಿ ಉತ್ತಮ ಸಂಸ್ಕೃತಿಯನ್ನು ರೂಪಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ಪ್ರಯತ್ನಕ್ಕಿಂತಲೂ ಫಲಿತಾಂಶಕ್ಕೇ ಹೆಚ್ಚಿನ ಪ್ರಾಶಸ್ತ್ಯ ನೀಡುವ ಸಮಾಜವು, ಯೋಗ್ಯತೆ ಆಧಾರಿತ ಮಾರ್ಗಗಳಿಗಿಂತ ಅಡ್ಡದಾರಿಗಳನ್ನೇ ಹುಡುಕುತ್ತದೆ' ಎಂದು ಪ್ರತಿಪಾದಿಸಿದ್ದಾರೆ.

'ತಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿಲ್ಲ ಎಂಬುದನ್ನು ಅರಿತು ವಿದ್ಯಾರ್ಥಿಗಳು ನಿರಾಶೆಗೊಳಗಾಗಿದ್ದಾರೆ. ಅವರಲ್ಲಿ ಇಂತಹ ಭಾವನೆ ಮತ್ತೊಮ್ಮೆ ಮೂಡದಂತೆ ನೋಡಿಕೊಳ್ಳಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ' ಎಂದು ಕರೆ ನೀಡಿದ್ದಾರೆ.

'ಯುವ ಭಾರತವು ಕನಸುಗಳು ಮತ್ತು ಚೈತನ್ಯದಿಂದ ತುಂಬಿದೆ. ನಮ್ಮ ಯಶಸ್ಸಿಗೆ ಅವರೇ (ಯುವಕರು) ಇಂಧನವಾಗಿದ್ದಾರೆ. ಪೋಷಕರು, ಶಿಕ್ಷಕರು, ಸ್ನೇಹಿತರು, ಸಂಬಂಧಿಕರು, ಶಾಲಾಡಳಿತಗಳೂ ಸೇರಿದಂತೆ ಒಂದು ಸಮಾಜವಾಗಿ, ದೇಶದ ಯುವಕರನ್ನು ಪ್ರೋತ್ಸಾಹಿಸಿ ಉತ್ಸಾಹದಿಂದ ಮುನ್ನಡೆಯುವಂತೆ ಮಾಡುವ ದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ' ಎಂದು ಹೇಳಿದ್ದಾರೆ.

ಆಗಿರುವುದೆಲ್ಲ ಒಳ್ಳೆಯದಕ್ಕೆ ಎಂದುಕೊಳ್ಳಿ: ವಿದ್ಯಾರ್ಥಿಗಳಿಗೆ ನೀಟ್ ಟಾಪರ್ ಸಲಹೆಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ 1997ರಲ್ಲೇ ಪ್ರತಿಭಟಿಸಿದ್ದ ಪ್ರಧಾನ್!

'ಕಠಿಣ ಪರಿಶ್ರಮಕ್ಕೆ ಫಲ ಸಿಗುವ, ಪ್ರಾಮಾಣಿಕತೆಯನ್ನು ಬೆಂಬಲಿಸುವ ಹಾಗೂ ಅರ್ಹತೆಗೆ ಯಶಸ್ಸು ಲಭಿಸುವ ಸಂಸ್ಕೃತಿಯನ್ನು ಸೃಷ್ಟಿಸಬೇಕಿದೆ. ನಮ್ಮ ಮಕ್ಕಳ ಭವಿಷ್ಯವನ್ನು ಬಲಪಡಿಸುವ ಮತ್ತು ಅವರ ಆಕಾಂಕ್ಷೆಗಳನ್ನು ರಕ್ಷಿಸುವ ನಿಟ್ಟಿನಲ್ಲಿ ನಾವೆಲ್ಲರೂ ಖಂಡಿತವಾಗಿಯೂ ಪರಿಹಾರಗಳನ್ನು ಕಂಡುಕೊಳ್ಳುತ್ತೇವೆ ಎಂಬ ವಿಶ್ವಾಸ ನನಗಿದೆ' ಎಂದಿದ್ದಾರೆ.

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರತಿಭಟನೆ
ಮೇ 3ರಂದು ನಡೆದಿದ್ದ ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಸುದ್ದಿ ದೇಶದಾದ್ಯಂತ ಭಾರಿ ವಿವಾದ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ), ಮರು ಪರೀಕ್ಷೆ ನಡೆಸುವುದಾಗಿ ಘೋಷಿಸಿತ್ತು. ಅದರಂತೆ ಮರುಪರೀಕ್ಷೆ ಜೂನ್‌ 21ರಂದು ನಡೆದಿದೆ. ಆದರೆ, ಮರುಪರೀಕ್ಷೆಯ ಬಳಿಕ ಪ್ರಕಟಿಸಿದ್ದ ಕೀ ಉತ್ತರಗಳಿಗೂ, ಫಲಿತಾಂಶದ ನಂತರ ಬಂದಿರುವ ಅಂಕಗಳಿಗೂ ವ್ಯತ್ಯಾಸವಿದೆ ಎಂಬ ಆರೋಪಗಳು ಇದೀಗ ವ್ಯಕ್ತವಾಗಿವೆ.

ಪ್ರಶ್ನೆ ಪತ್ರಿ ಸೋರಿಕೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು, ಇದರ ಹೊಣೆ ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಬೇಕು ಮತ್ತು ಪ್ರಕರಣದಲ್ಲಿ ಭಾಗಿಯಾದ ಎಲ್ಲರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕಾಕ್ರೋಚ್‌ ಜನತಾ ಪಕ್ಷ (ಸಿಜೆಪಿ), ಜಂತರ್‌ ಮಂತರ್‌ನಲ್ಲಿ ಜೂನ್‌ 20ರಿಂದ ಪ್ರತಿಭಟನೆ ನಡೆಸುತ್ತಿದೆ. ಈ ಹೋರಾಟಕ್ಕೆ ಬೆಂಬಲ ಸೂಚಿಸಿರುವ ಪರಿಸರವಾದಿ ಮತ್ತು ಶಿಕ್ಷಣ ತಜ್ಞ ಸೊನಮ್‌ ವಾಂಗ್ಚೂಕ್‌ ಅವರು ಜೂನ್‌ 28ರಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ವಿವಿಧ ರಾಜಕೀಯ ಪಕ್ಷಗಳೂ ಪ್ರತಿಭಟನೆಗೆ ಧುಮುಕಿರುವುದರಿಂದ, ಸರ್ಕಾರದ ಮೇಲಿನ ಒತ್ತಡವೂ ಹೆಚ್ಚಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Prajavani