ಗದಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿನಲ್ಲಿ ಅನುಷ್ಠಾನಗೊಳ್ಳುವ ಸಾಲ ಯೋಜನೆ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 15ರವರೆಗೆ ವಿಸ್ತರಿಸಲಾಗಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 'ಅರಿವು' ವಿದ್ಯಾಭ್ಯಾಸ ಸಾಲ ಯೋಜನೆಯಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಕೋರ್ಸ್‌ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳು ನವೀಕರಣಕ್ಕೆ ಅರ್ಜಿ ಸಲ್ಲಿಸಬೇಕು.
https://kmdconline.karnataka.gov.in ಮೂಲಕ ಅರ್ಜಿ ಸಲ್ಲಿಸಿ, ಅದರ ಪ್ರತಿಯೊಂದಿಗೆ ವಿವಿಧ ದಾಖಲೆಗಳನ್ನು ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಮೌಲಾನಾ ಆಜಾದ್ ಅಲ್ಪಸಂಖ್ಯಾತರ ಭವನ, 1ನೇ ಮಹಡಿ, ಜಿಲ್ಲಾ ನ್ಯಾಯಲಯ ಎದುರು, ಹುಬ್ಬಳ್ಳಿ ರಸ್ತೆ, ಗದಗ, ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:08372-295147 ಸಂಪರ್ಕಿಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
261104-23-159989732

