Dailyhunt Logo
  • Light mode
    Follow system
    Dark mode
    • Play Story
    • App Story
ಅಯೋಧ್ಯೆ ಬೆನ್ನಲ್ಲೇ ಬದರಿನಾಥದಲ್ಲೂ ದೇಣಿಗೆ ದುರುಪಯೋಗ ಆರೋಪ: ತನಿಖೆಗೆ ಆದೇಶ

ಅಯೋಧ್ಯೆ ಬೆನ್ನಲ್ಲೇ ಬದರಿನಾಥದಲ್ಲೂ ದೇಣಿಗೆ ದುರುಪಯೋಗ ಆರೋಪ: ತನಿಖೆಗೆ ಆದೇಶ

ಡೆಹ್ರಾಡೂನ್: ಅಯೋಧ್ಯೆಯ ರಾಮಮಂದಿರದ ದೇಣಿಗೆ ದುರುಪಯೋಗ ಆರೋಪಗಳ ಬೆನ್ನಲ್ಲೇ, ಬದರಿನಾಥ ದೇಗುಲದಲ್ಲೂ ಇಂತಹದೇ ಆರೋಪಗಳ ಕೇಳಿಬಂದಿದ್ದು, ಬದರಿನಾಥ-ಕೇದಾರನಾಥ ದೇಗುಲ ಸಮಿತಿ (ಬಿಕೆಟಿಸಿ) ತನಿಖೆಗೆ ಆದೇಶಿಸಿದೆ.

ದೇಣಿಗೆ ದುರುಪಯೋಗ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ನಡೆಯುತ್ತಿದೆ.

ಈ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖಾ ಸಮಿತಿಯನ್ನು ರಚಿಸಲು ಆದೇಶಿಸಲಾಗಿದೆ. ಜತೆಗೆ, ಸಂಬಂಧಪಟ್ಟವರಿಂದಲೂ ವಿವರಣೆ ಕೇಳಲಾಗಿದೆ ಎಂದು ಬಿಕೆಟಿಸಿ ಅಧ್ಯಕ್ಷ ಹೇಮಂತ್ ದ್ವಿವೇದಿ ತಿಳಿಸಿದ್ದಾರೆ.

ಇದೇ ವೇಳೆ, ಉದ್ಯೋಗಿಯೊಬ್ಬರನ್ನು ತಮ್ಮ ವೈಯಕ್ತಿಕ ಕಾರ್ಯದರ್ಶಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಂಬಿಸಲಾಗುತ್ತಿದೆ ಎಂಬ ಆರೋಪ ತಳ್ಳಿಹಾಕಿರುವ ದ್ವಿವೇದಿ, 'ಆ ವ್ಯಕ್ತಿ ನನ್ನ ವೈಯಕ್ತಿಕ ಕಾರ್ಯದರ್ಶಿಯಲ್ಲ, ಬದಲಿಗೆ, ಬಿಕೆಟಿಸಿಯ ಸರ್ಕಾರಿ ನೌಕರ' ಎಂದು ಸ್ಪಷ್ಟಪಡಿಸಿದ್ದಾರೆ.

ತನಿಖೆಯ ಸಂದರ್ಭದಲ್ಲಿ ಆರೋಪಗಳು ಸಾಬೀತಾದರೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದೂ ಅವರು ಭರವಸೆ ನೀಡಿದ್ದಾರೆ.

ಲಭ್ಯವಿರುವ ಸಾಕ್ಷ್ಯ, ಸಿಸಿಟಿವಿ ದೃಶ್ಯಾವಳಿ ಮತ್ತು ಸಂಬಂಧಪಟ್ಟವರ ಹೇಳಿಕೆಗಳ ಆಧಾರದ ಮೇಲೆ ತನಿಖಾ ಸಮಿತಿಯು ತನ್ನ ವರದಿ ಸಲ್ಲಿಸಲಿದೆ ಎಂದು ಬಿಕೆಟಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೋಹನ್ ಸಿಂಗ್ ತಿಳಿಸಿದ್ದಾರೆ.

ಯಾವುದೇ ಅಕ್ರಮಗಳು ಸಾಬೀತಾದಲ್ಲಿ ಬದರಿನಾಥ-ಕೇದಾರನಾಥ ದೇಗುಲ ಸಮಿತಿ ಕಾಯ್ದೆ-1939 ಮತ್ತು ನೌಕರರ ನಡಾವಳಿ ನಿಯಮಗಳ ಅಡಿಯಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಂಗ್ ಹೇಳಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani