Dailyhunt Logo
  • Light mode
    Follow system
    Dark mode
    • Play Story
    • App Story
ಬೆಳಗಾವಿ: ಕಾಮಗಾರಿ ಪರಿಶೀಲಿಸಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಕಾಮಗಾರಿ ಪರಿಶೀಲಿಸಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಕೈಗೆತ್ತಿಕೊಂಡ ಕಟ್ಟಡ ನವೀಕರಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಂಗಳವಾರ ಪರಿಶೀಲಿಸಿದರು.

ಕಟ್ಟಡ ಆವರಣದ ಸೌಂದರ್ಯೀಕರಣ ಮತ್ತು ಸಾರ್ವಜನಿಕ ಸೌಲಭ್ಯಗಳ ಕಾಮಗಾರಿಗಳನ್ನು ಗುಣಮಟ್ಟದಿಂದ ಮತ್ತು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಚಿವ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಚೇರಿ ಆವರಣದಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಧ್ವಜ ಸ್ತಂಭದ ಕಾಮಗಾರಿ, ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಪರಿಶೀಲಿಸಿದರು.

ಸುಸಜ್ಜಿತ ರಸ್ತೆ, ಪಾರ್ಕಿಂಗ್ ವ್ಯವಸ್ಥೆ:

'ಜಿಲ್ಲಾಧಿಕಾರಿ ಕಚೇರಿಗೆ ಪ್ರತಿದಿನ ಸಾರ್ವಜನಿಕರು ಬಂದು ಹೋಗುವುದರಿಂದ, ಅವರಿಗೆ ಯಾವುದೇ ತೊಂದರೆಯಾಗದಂತೆ ಸಮಗ್ರ ಆವರಣ ಯೋಜನೆಯನ್ನು ರೂಪಿಸಲಾಗಿದೆ. ಕಚೇರಿ ಆವರಣದಲ್ಲಿ ಸುಸಜ್ಜಿತ ರಸ್ತೆಗಳ ನಿರ್ಮಾಣ ಹಾಗೂ ಸಾರ್ವಜನಿಕರ ವಾಹನಗಳ ನಿಲುಗಡೆಗಾಗಿ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ' ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಅವರು ಸಚಿವರಿಗೆ ವಿವರಿಸಿದರು.

ಶಾಸಕ ಆಸಿಫ್ ಸೇಠ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಇದ್ದರು.

Dailyhunt
Disclaimer: This content has not been generated, created or edited by Dailyhunt. Publisher: Prajavani