ಬೆಳಗಾವಿ: 'ಸತೀಶ ಜಾರಕಿಹೊಳಿ ರಾಜ್ಯ ಮಾತ್ರವಲ್ಲ; ರಾಷ್ಟ್ರಮಟ್ಟದ ನಾಯಕ. ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಅಂಬೇಡ್ಕರ್ ಜನಜಾಗೃತಿ ವೇದಿಕೆ ಜಿಲ್ಲಾ ಘಟಕದ ಗೌರವಾಧ್ಯಕ್ಷ ಮಲ್ಲಿಕಾರ್ಜುನ ರಾಸಿಂಗೆ ಅವರನ್ನು ಆ ಸಂಘಟನೆಯಿಂದ ಹಾಗೂ ಕಾಂಗ್ರೆಸ್‌ನಿಂದ ಉಚ್ಛಾಟನೆ ಮಾಡಬೇಕು' ಎಂದು ಪರಿಶಿಷ್ಟ ಮುಖಂಡರಾದ ಮಹಾವೀರ ಮೋಹಿತೆ ಹಾಗೂ ಮಲ್ಲೇಶ ಚೌಗಲೆ ಆಗ್ರಹಿಸಿದರು.
ಇಲ್ಲಿ ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಸಾಮಾಜಿಕ ಮಾಧ್ಯಮಗಳಲ್ಲಿ ಮಲ್ಲಿಕಾರ್ಜುನ ರಾಸಿಂಗೆ ಅವರು, ಸತೀಶ ಜಾರಕಿಹೊಳಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಲವಾಗಿ ವಿರೋಧಿಸುತ್ತೇವೆ' ಎಂದರು.
'ಸತೀಶ ಜಾರಕಿಹೊಳಿ ತುಳಿಯುವ ಪ್ರಯತ್ನ ದಶಕಗಳಿಂದಲೂ ನಡೆಯುತ್ತಲೇ ಬಂದಿದೆ. ಮಲ್ಲಿಕಾರ್ಜುನ ರಾಸಿಂಗೆ ಅವರು ತಮ್ಮ ಹೇಳಿಕೆ ವಾಪಸ್ ಪಡೆದು, ಬಹಿರಂಗವಾಗಿ ಕ್ಷಮೆಯಾಚಿಸಬೇಕು' ಎಂದು ಒತ್ತಾಯಿಸಿದರು.
ಸುನೀತಾ ಐಹೊಳೆ, ಕೆಂಪಣ್ಣ ಶಿರಹಟ್ಟಿ, ಮಹಾದೇವ ತಳವಾರ, ವಿಕ್ರಂ ಕರನಿಂಗ, ಸಂಜೀವ ಕಾಂಬಳೆ, ಶಾನೂರ್ ತಹಶೀಲ್ದಾರ್ ಇತರರಿದ್ದರು.

