ಬೆಳಗಾವಿ: 'ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಯನ್ನು ಬೆಳಗಾವಿಯಲ್ಲಿ ನಿಷೇಧಿಸುವಂತೆ ಮುಖ್ಯಮಂತ್ರಿಯನ್ನು ಆಗ್ರಹಿಸುವೆ' ಎಂದು ಜವಳಿ ಸಚಿವ ಶ್ರೀಮಂತ ಪಾಟೀಲ ಹೇಳಿದರು.
ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಎಂಇಎಸ್‌ಗೆ ಈಗ ಅಸ್ತಿತ್ವವೇ ಉಳಿದಿಲ್ಲ. ಆ ಸಂಘಟನೆಯ ಬೆಂಬಲಿತರು ಎಲ್ಲ ಕಡೆಯೂ ಸೋಲುತ್ತಿದ್ದಾರೆ' ಎಂದು ಟೀಕಿಸಿದರು.
ಕರ್ನಾಟಕ-ಮಹಾರಾಷ್ಟ್ರ ಗಡಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿ: ಠಾಕ್ರೆ
ಗಡಿ ವಿಚಾರವಾಗಿ ಮಹಾರಾಷ್ಟ್ರದಲ್ಲಿ ಪುಸ್ತಕ ಬಿಡುಗಡೆ ಮಾಡಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, 'ಅಲ್ಲಿಯವರಿಗೆ ಒಳ್ಳೆಯದನ್ನು ಬರೆಯಲು ಬರುವುದಿಲ್ಲ. ಹೀಗಾಗಿ, ಇಂತಹ ಕೆಲಸ ಮಾಡುತ್ತಿದ್ದಾರೆ.
'ಗಡಿ ವಿಷಯ ಮುಗಿದು ಹೋದ ಅಧ್ಯಾಯ. ಅದರ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ. ಅಭಿವೃದ್ಧಿ ಮರೆತಿರುವ ಮಹಾರಾಷ್ಟ್ರ ಸರ್ಕಾರ ರಾಜಕಾರಣಕ್ಕಾಗಿ ಗಡಿ ವಿವಾದವನ್ನು ಕೆದಕುತ್ತಿದೆ' ಎಂದು ಟೀಕಿಸಿದರು.
ಜನರ ದಿಕ್ಕು ತಪ್ಪಿಸಲು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಯತ್ನ: ರಮೇಶ ಜಾರಕಿಹೊಳಿ

