Dailyhunt Logo
  • Light mode
    Follow system
    Dark mode
    • Play Story
    • App Story
ಬೆಂಗಳೂರು: ಉಬರ್ ಚಾಲಕನ ಮೇಲೆ ಮನಸೋಇಚ್ಛೆ ಹಲ್ಲೆ

ಬೆಂಗಳೂರು: ಉಬರ್ ಚಾಲಕನ ಮೇಲೆ ಮನಸೋಇಚ್ಛೆ ಹಲ್ಲೆ

ಬೆಂಗಳೂರು: ನಗರದ ಡಬಲ್ ರಸ್ತೆಯಲ್ಲಿ ಮಧ್ಯರಾತ್ರಿ ಉಬರ್ ಕ್ಯಾಬ್‌ ಚಾಲಕರೊಬ್ಬರ ಮೇಲೆ ಕಾರಿನಲ್ಲಿ ಬಂದ ಗುಂಪೊಂದು ಹಲ್ಲೆ ನಡೆಸಿ ಪರಾರಿಯಾಗಿದೆ.

ಕೃತ್ಯವೆಸಗಿದ ದೃಶ್ಯವು ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ ವಿಲ್ಸನ್‌ ಗಾರ್ಡನ್‌ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಉಬರ್ ಚಾಲಕ ರಸ್ತೆ ಬದಿ ಕಾರು ನಿಲ್ಲಿಸಿಕೊಂಡಿದ್ದ ವೇಳೆ, ಮತ್ತೊಂದು ಕಾರು ಮತ್ತು ಸ್ಕೂಟರ್‌ನಲ್ಲಿ ಬಂದ ಏಳೆಂಟು ಜನರು, ಚಾಲಕನನ್ನು ಕಾರಿನಿಂದ ಹೊರಗೆ ಎಳೆದು ಹಲ್ಲೆ ನಡೆಸಿದ್ದಾರೆ.

ಮತ್ತೊಂದು ಬದಿ ಮಹಿಳೆಯೊಬ್ಬರು ಕುಳಿತ್ತಿದ್ದರು. ವ್ಯಕ್ತಿಯೊಬ್ಬರ ಕಾರಿನ ಬಾಗಿಲು ತೆರೆದು ಹಲ್ಲೆ ನಡೆಸಿದ್ದಾರೆ. ಚಾಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಬಿಡದೆ ಹಲ್ಲೆ ನಡೆಸಿದ್ದಾರೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಘಟನೆ ಸಂಬಂಧ ದೂರು ದಾಖಲಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೆ.ಎಚ್.ರಸ್ತೆ ಮತ್ತು ಸುತ್ತಮುತ್ತಲಿನ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಆರೋಪಿಗಳ ವಾಹನ ಮತ್ತು ಸಂತ್ರಸ್ತರ ವಾಹನದ ನೋಂದಣಿ ಸಂಖ್ಯೆ ಆಧರಿಸಿ ತನಿಖೆ ನಡೆಸುತ್ತಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani