Dailyhunt Logo
  • Light mode
    Follow system
    Dark mode
    • Play Story
    • App Story
ಬೇತಮಂಗಲದಲ್ಲಿ ವೆಂಕಟೇಶ್ವರ ದೇಗುಲ ಉದ್ಘಾಟನೆ ಮತ್ತು ಕಲಶ ಪ್ರತಿಷ್ಠಾಪನೆ

ಬೇತಮಂಗಲದಲ್ಲಿ ವೆಂಕಟೇಶ್ವರ ದೇಗುಲ ಉದ್ಘಾಟನೆ ಮತ್ತು ಕಲಶ ಪ್ರತಿಷ್ಠಾಪನೆ

ಬೇತಮಂಗಲ: ರಾಮಸಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಿಂಡಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀದೇವಿ ಭೂದೇವಿ ಸಮೇತ ವೆಂಕಟೇಶ್ವರ ಸ್ವಾಮಿ ದೇಗುಲ ಉದ್ಘಾಟನೆ ಮತ್ತು ಕಲಶ ಪ್ರತಿಷ್ಠಾಪನಾ ಮಹೋತ್ಸವವು ಗುರುವಾರ ಮತ್ತು ಶುಕ್ರವಾರ ಶ್ರದ್ಧಾ-ಭಕ್ತಿಯಿಂದ ನೆರವೇರಿತು.

ದೇವಾಲಯದ ಪ್ರತಿಷ್ಠಾಪನೆ ಅಂಗವಾಗಿ ಗುರುವಾರ ಸಂಜೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದವು. ಶುಕ್ರವಾರ ಬೆಳಗ್ಗೆ ವಿಗ್ರಹ ಪ್ರತಿಷ್ಠಾಪಿಸಲಾಯಿತು. ಗ್ರಾಮವನ್ನು ವಿದ್ಯುತ್ ದೀಪ ಹಾಗೂ ಹಸಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.

ಶಾಸಕಿ ರೂಪಕಲಾ, ಪ್ರಸನ್ನ ವೆಂಕಟೇಶ್ವರ ಸ್ವಾಮಿ ದೇವಾಲಯದ ಅಧ್ಯಕ್ಷ ಪದ್ಮನಾಭ ರೆಡ್ಡಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಪ್ಪ, ಮಾಜಿ ಸದಸ್ಯ ಚನ್ನಕೇಶವ ರೆಡ್ಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ರೆಡ್ಡಿ, ಬಾಲ್ ರೆಡ್ಡಿ ಸೇರಿದಂತೆ ಇತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-18-1999685899

Dailyhunt
Disclaimer: This content has not been generated, created or edited by Dailyhunt. Publisher: Prajavani